Mysore
19
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಇಂಗ್ಲೆಂಡ್‌ ವಿರುದ್ಧದ ಕೊನೆಯ 3 ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡ ಪ್ರಕಟ; ತಂಡದಲ್ಲಿಲ್ಲ ಕಿಂಗ್‌ ಕೊಹ್ಲಿ!

ಭಾರತ ಪ್ರವಾಸವನ್ನು ಕೈಗೊಂಡಿರುವ ಇಂಗ್ಲೆಂಡ್‌ ವಿರುದ್ಧ ಸದ್ಯ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಟೀಮ್‌ ಇಂಡಿಯಾ ನಿರತವಾಗಿದ್ದು, ಮೊದಲ ಪಂದ್ಯದಲ್ಲಿ ಸೋತು, ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಕಮ್‌ಬ್ಯಾಕ್‌ ಮಾಡಿದೆ. ಇನ್ನು ವೈಯಕ್ತಿಕ ಕಾರಣಗಳಿಂದ ಈ ಎರಡೂ ಪಂದ್ಯಗಳಿಗೂ ವಿರಾಟ್‌ ಕೊಹ್ಲಿ ಲಭ್ಯವಿರಲಿಲ್ಲ. ಈ ಕುರಿತು ಸ್ವತಃ ವಿರಾಟ್‌ ಕೊಹ್ಲಿಯೇ ಮಾಹಿತಿಯನ್ನು ಬಿಸಿಸಿಐ ಜತೆ ಹಂಚಿಕೊಂಡಿದ್ದರು.

ಹೀಗೆ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಕೊಹ್ಲಿ ಉಳಿದ ಮೂರು ಪಂದ್ಯಗಳಿಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಇದೀಗ ಈ ಪಂದ್ಯಗಳಿಗೆ ಬಿಸಿಸಿಐ 17 ಆಟಗಾರರನ್ನೊಳಗೊಂಡ ಟೀಮ್‌ ಇಂಡಿಯಾವನ್ನು ಪ್ರಕಟಿಸಿದ್ದು, ವಿರಾಟ್‌ ಕೊಹ್ಲಿ ಹೆಸರು ಇಲ್ಲದಿರುವುದು ಅವರ ಅಭಿಮಾನಿಗಳಲ್ಲಿ ಬೇಸರಕ್ಕೆ ಕಾರಣವಾಗಿದೆ.

ಇನ್ನು ಬೆನ್ನು ನೋವಿಗೆ ಉಂಟಾಗಿರುವ ಶ್ರೇಯಸ್‌ ಅಯ್ಯರ್‌ ಸಹ ತಂಡದಿಂದ ಹೊರಬಿದ್ದಿದ್ದಾರೆ. ಎರಡನೇ ಪಂದ್ಯಕ್ಕೆ ಕೆಎಲ್‌ ರಾಹುಲ್‌ ಬದಲಿ ಆಟಗಾರನಾಗಿ ಕಣಕ್ಕಿಳಿದಿದ್ದ ಸರ್ಫರಾಜ್‌ ಖಾನ್‌ ತಂಡಲ್ಲಿದ್ದು, ಕೆಎಸ್‌ ಭರತ್‌ ಹಾಗೂ ಧ್ರುವ್‌ ಜುರೆಲ್‌ ಇಬ್ಬರು ವಿಕೆಟ್‌ ಕೀಪರ್‌ಗಳಿದ್ದಾರೆ.

ನ್ಯಾಷನಲ್‌ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆಗೆ ಒಳಗಾಗಿರುವ ಕೆಎಲ್‌ ರಾಹುಲ್‌ ಹಾಗೂ ರವೀಂದ್ರ ಜಡೇಜಾ ಹೆಸರೂ ಸಹ ಇದ್ದು, ಫಿಟ್‌ನೆಸ್‌ ಟೆಸ್ಟ್‌ ಪರೀಕ್ಷೆ ಪಾಸ್‌ ಆದರಷ್ಟೇ ಈ ಆಟಗಾರರಿಗೆ ಮೂರನೇ ಪಂದ್ಯದ ಆಡುವ ಬಳಗದಲ್ಲಿ ಅವಕಾಶ ಸಿಗಲಿದೆ.

ಪ್ರಕಟವಾಗಿರುವ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಜತ್ ಪಾಟಿದಾರ್, ರವೀಂದ್ರ ಜಡೇಜಾ, ಕೆಎಸ್ ಭರತ್ (ವಿಕೆಟ್‌ ಕೀಪರ್), ಧ್ರುವ್ ಜುರೆಲ್ (ವಿಕೆಟ್‌ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್‌ ಅಶ್ವಿನ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!