ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ಗುರುವಾರ 58 ಕೋಟಿ ನಗದು ಬಹುಮಾನ ಘೋಷಿಸಿದೆ.
ಇತ್ತೀಚೆಗೆ ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡ ನ್ಯೂಜಿಲೆಂಡ್ ವಿರುದ್ಧ ಜಯ ಸಾಧಿಸಿ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿತ್ತು.
ಆಟಗಾರರು, ತರಬೇತಿ ಹಾಗೂ ಬೆಂಬಲ ಸಿಬ್ಬಂದಿ, ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಸದಸ್ಯರಿಗೆ ಈ ಬಹುಮಾನದಲ್ಲಿ ಪಾಲಿದೆ. ಆದರೆ, ಯಾರಿಗೆ ಎಷ್ಟು ಸಿಗಲಿದೆ ಎಂಬುದರ ಬಗ್ಗೆ ಬಿಸಿಸಿಐ ಮಾಹಿತಿ ನೀಡಿಲ್ಲ.
ಬಿಸಿಸಿಐ ನಿಂದ ಟೀ ಇಂಡಿಯಾಗೆ ನೀಡಿರುವ ಈ ಬಹುಮಾನವು ಜಾಗತಿಕ ವೇದಿಕೆಯಲ್ಲಿ ಭಾರತ ತಂಡದ ಸಮರ್ಪಣಾಭಾವ ಹಾಗೂ ಶ್ರೇಷ್ಠತೆಯನ್ನು ಗುರುತಿಸುತ್ತದೆ ಎಂದು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ತಿಳಿಸಿದ್ದಾರೆ.





