ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ, ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕೇಂದ್ರಿಯ ಗುತ್ತಿಗೆಯ ‘ಎ ಪ್ಲಸ್’ ಗ್ರೇಡ್ ಪಡೆದಿದ್ದಾರೆ.
ಈ ನಾಲ್ವರು ಆಟಗಾರರೂ ವಾರ್ಷಿಕ ತಲಾ ₹7 ಕೋಟಿ ಮೌಲ್ಯ ಪಡೆಯಲಿದ್ದಾರೆ. ಈ ಪೈಕಿ ರವೀಂದ್ರ ಜಡೇಜ ಬಡ್ತಿ ಪಡೆದಿದ್ದಾರೆ.
2022-23ನೇ ಸಾಲಿನ ಕೇಂದ್ರಿಯ ಗುತ್ತಿಗೆ ಒಪ್ಪಂದ ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ‘ಎ ಪ್ಲಸ್’ ಗ್ರೇಡ್ ಪಡೆದವರು ವಾರ್ಷಿಕ ತಲಾ ₹7 ಕೋಟಿ, ‘ಎ’ ಗ್ರೇಡ್ ಪಡೆದವರು ತಲಾ ₹5 ಕೋಟಿ, ‘ಬಿ’ ಗ್ರೇಡ್ ಪಡೆದವರು ತಲಾ ₹3 ಕೋಟಿ ಮತ್ತು ‘ಸಿ’ ಗ್ರೇಡ್ ಪಡೆದವರು ತಲಾ ₹1 ಕೋಟಿ ಪಡೆಯಲಿದ್ದಾರೆ.
ಗುತ್ತಿಗೆ ಪಟ್ಟಿಯಲ್ಲಿ ಒಟ್ಟು 26 ಆಟಗಾರರು ಸ್ಥಾನ ಪಡೆದಿದ್ದಾರೆ. ಭುವನೇಶ್ವರ್ ಕುಮಾರ್, ಅಜಿಂಕ್ಯ ರಹಾನೆ ಮತ್ತು ಇಶಾಂತ್ ಶರ್ಮಾ ಗುತ್ತಿಗೆ ಒಪ್ಪಂದ ಗಿಟ್ಟಿಸುವಲ್ಲಿ ವಿಫಲರಾಗಿದ್ದಾರೆ.
ಕನ್ನಡಿಗ ಕೆ.ಎಲ್. ರಾಹುಲ್, ‘ಬಿ’ ಗ್ರೇಡ್‌ಗೆ ಹಿಂಬಡ್ತಿ ಪಡೆದಿದ್ದಾರೆ. ಆಲ್‌ರೌಂಡರ್ ಅಕ್ಷರ್ ಪಟೇಲ್ ‘ಎ’ ಗ್ರೇಡ್‌ಗೆ ಬಡ್ತಿ ಪಡೆದಿದ್ದಾರೆ. ವಿಕೆಟ್ ಕೀಪರ್ ಕೆ.ಎಸ್. ಭರತ್ ಇದೇ ಮೊದಲ ಬಾರಿಗೆ ‘ಸಿ’ ಗ್ರೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಬಿಸಿಸಿಐ ಕೇಂದ್ರಿಯ ಗುತ್ತಿಗೆ ಒಪ್ಪಂದ; ಆಟಗಾರರ ಗ್ರೇಡ್ ವಿವರ ಇಂತಿದೆ:
ಎ ಪ್ಲಸ್ ಗ್ರೇಡ್ (₹7 ಕೋಟಿ): ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್‌ಪ್ರೀತ್ ಬೂಮ್ರಾ, ರವೀಂದ್ರ ಜಡೇಜ
ಎ ಗ್ರೇಡ್ (₹5 ಕೋಟಿ): ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಮೊಹಮ್ಮದ್ ಶಮಿ, ರಿಷಭ್ ಪಂತ್, ಅಕ್ಷರ್ ಪಟೇಲ್
ಬಿ ಗ್ರೇಡ್ (₹3 ಕೋಟಿ): ಚೇತೇಶ್ವರ ಪೂಜಾರ, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭಮನ್ ಗಿಲ್.
ಸಿ ಗ್ರೇಡ್ (₹1 ಕೋಟಿ): ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶಾನ್, ದೀಪಕ್ ಹೂಡಾ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆ.ಎಸ್. ಭರತ್.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…