ಕ್ರೀಡೆ

ಪಹಲ್ಗಾಮ್ ಘಟನೆ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಮಹಿಳಾ, ಪುರುಷರ ತಂಡ‌

ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನ ವಿರುದ್ಧ ಸಮರ ಸಾರಿರುವ ಭಾರತ ಆಪರೇಷನ್ ಸಿಂಧೂರ್ ಮೂಲಕ ಕ್ಷಿಪಣಿ ದಾಳಿ ನಡೆಸಿ ಪಾಕ್‌ಗೆ ತಕ್ಕ ಪಾಠ ಕಲಿಸಿದೆ. ಇದರ ನಡುವೆಯೇ ಇದೀಗ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಭಾರತೀಯ ಕ್ರಿಕೆಟ್‌ ಮಂಡಳಿ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ನಡೆಸುವ ಎಲ್ಲಾ ಟೂರ್ನಿಗಳಿಂದ ಸದ್ಯಕ್ಕೆ ದೂರವಿರಲು ನಿರ್ಧರಿಸಿದೆ. ಹೀಗಾಗಿ ಈ ವರ್ಷ ನಡೆಯಲಿರುವ ಏಷ್ಯಾಕಪ್‌ ಟೂರ್ನಿಯಲ್ಲಿ ಟೀಮ್‌ ಇಂಡಿಯಾ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ.

ಶ್ರೀಲಂಕಾದಲ್ಲಿ ಮುಂದಿನ ತಿಂಗಳಿಂದ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್‌ ಟೂರ್ನಿ ನಡೆಯಲಿದೆ. ಈ ಟೂರ್ನಿಗೆ ತಂಡವನ್ನು ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿದೆ.

ಹಾಗೆಯೇ ಈ ವರ್ಷಾಂತ್ಯದಲ್ಲಿ ಪುರುಷರ ಏಷ್ಯಾಕಪ್‌ ಟೂರ್ನಿ ಆಯೋಜಿಸಲು ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ನಿರ್ಧರಿಸಿತ್ತು. ಇದೀಗ ಈ ಟೂರ್ನಿಯಿಂದಲೂ ಭಾರತ ಹೊರಗುಳಿಯುವುದಾಗಿ ಬಿಸಿಸಿಐ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

7 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

10 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

11 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

12 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

13 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

17 hours ago