ನವದೆಹಲಿ : ಬಹುನಿರೀಕ್ಷಿತ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್ ಕ್ರಿಕೆಟ್ ಟೂರ್ನಿ 2023ರ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಬಿಸಿಸಿಐ ಮೂಲಗಳಿಂದ ಮಾಹಿತಿ ಲಭಿಸಿದ್ದು, ಟೂರ್ನಿಯಲ್ಲಿ 5 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ ಎಂದು ಗೊತ್ತಾಗಿದೆ. ಮಹಿಳಾ ಐಪಿಎಲ್ ಕ್ರಿಕೆಟ್ ಟೂರ್ನಿ ಲೀಗ್ ಹಂತದಲ್ಲಿ 20 ಪಂದ್ಯಗಳು ಇರಲಿದ್ದು, ಪ್ರತಿ ತಂಡಗಳು ಪರಸ್ಪರ 2 ಬಾರಿ ಮುಖಾಮುಖಿಯಾಗಲಿವೆ. ಲೀಗ್‌ನಲ್ಲಿ ಅಗ್ರಸ್ಥಾನ ಪಡೆಯುವ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದ್ದು, 2 ಮತ್ತು 3ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ನಲ್ಲಿ ಸೆಣಸಲಿವೆ. ಪ್ರತಿ ತಂಡ ಆಡುವ 11ರ ಬಳಗದಲ್ಲಿ 5 ವಿದೇಶಿ ಆಟಗಾರ್ತಿಯರನ್ನು ಹೊಂದುವ ಅವಕಾಶವಿದೆ.
ಮಹಿಳಾ ಐಪಿಎಲ್ ಟೂರ್ನಿಯಲ್ಲಿ ತಂಡವೊಂದರ ಆಡುವ ಹನ್ನೊಂದರ ಬಳಗದಲ್ಲಿ ನಾಲ್ವರು ವಿದೇಶಿ ಆಟಗಾರ್ತಿಯರು(ಐಸಿಸಿ ಪೂರ್ಣ ಸದಸ್ಯತ್ವ ಹೊಂದಿದ ಆಟಗಾರ್ತಿಯರು) ಹಾಗೂ ಅಸೋಸಿಯೇಟ್ ರಾಷ್ಟ್ರದ ಓರ್ವ ಆಟಗಾರ್ತಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು. ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ತಂಡವು ನೇರವಾಗಿ ಫೈನಲ್ ಪ್ರವೇಶಿಸಲಿದೆ. ಇನ್ನು ಎರಡನೇ ಹಾಗೂ ಮೂರನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವನ್ನು ಆಡಲಿದ್ದು, ವಿಜೇತ ತಂಡವು ಫೈನಲ್ ಪಂದ್ಯದಲ್ಲಿ ಸೆಣಸಾಡಲಿದೆ.
ದಕ್ಷಿಣ ಆಫ್ರಿಕಾದಲ್ಲಿ ಫೆಬ್ರವರಿ 9ರಿಂದ 26ರ ವರೆಗೆ ಮಹಿಳಾ ಟಿ20 ವಿಶ್ವಕಪ್ ನಡೆಯಲಿದ್ದು, ಆ ಬಳಿಕ ಐಪಿಎಲ್ ನಡೆಯುವ ನಿರೀಕ್ಷೆಯಿದೆ. ಕ್ಯಾರವಾನ್ ಮಾದರಿಯಲ್ಲಿ 2 ತಾಣಗಳಲ್ಲಿ ತಲಾ 10 ಪಂದ್ಯಗಳನ್ನು ಆಡಿಸುವ ನಿರೀಕ್ಷೆಯಿದೆ. ವಲಯವಾರು ಆಧರಿಸಿ ಬೆಂಗಳೂರು, ಅಹ್ಮದಾಬಾದ್, ಚೆನ್ನೈ, ಡೆಲ್ಲಿ, ಕೋಲ್ಕತಾ ಮತ್ತು ಮುಂಬೈ ನಗರಗಳು ಪಂದ್ಯ ಆಯೋಜಿಸುವ ಆಯ್ಕೆ ಪಟ್ಟಿಯಲ್ಲಿವೆ. ಟೂರ್ನಿ ಬಗ್ಗೆ ಐಪಿಎಲ್ ಆಡಳಿತ ಮಂಡಳಿ ಮತ್ತು ಬಿಸಿಸಿಐ ಪದಾಧಿಕಾರಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…