ನವದೆಹಲಿ : ಭಾರತ ತಂಡದ ಶ್ರೇಷ್ಠ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ವಿಶೇಷ ಗೌರವ ಸಲ್ಲಿಸಿದೆ. ಭಾರತ ತಂಡ ವಿಶ್ವಕಪ್ ವಿಜೇತ ನಾಯಕ ಧೋನಿ ಅವರು ಧರಿಸುತ್ತಿದ್ದ 7ನೇ ಕ್ರಮಾಂಕದ ಜೆರ್ಸಿಯನ್ನು ಬಿಸಿಸಿಐ ನಿವೃತ್ತಿಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಭಾರತ ತಂಡದ ಆಟಗಾರರಿಗೆ ಇನ್ನುಮುಂದೆ 7ನೇ ಕ್ರಮಾಕದ ಜೆರ್ಸಿ ಲಭ್ಯವಿರುವುದಿಲ್ಲ ಎಂದು ವರದಿಯಾಗಿದೆ.
ಐಸಿಸಿ (ಇಂಟರ್‌ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್) ಆಯೋಜಿಸುವ ಟೂರ್ನಿಗಳಲ್ಲಿ ಭಾರತ ಪರ ಅತ್ಯಂತ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಧೋನಿ ಅವರ ಜೆರ್ಸಿ ನಂ.7ನ್ನು ಮೀಸಲಿಡಲಾಗಿದೆ. ಭಾರತ ಕ್ರಿಕೆಟ್ ತಂಡಕ್ಕೆ ವಿಕೇಟ್ ಕೀಪರ್ ನಾಯಕನಾಗಿ ಮಹೇಂದ್ರ ಸಿಂಗ್ ಧೋನಿ ನೀಡಿರುವ ಅಪಾರ ಕೊಡುಗೆಯನ್ನು ಗೌರವಿಸಲು ನಂ.7ನ್ನು ನಿವೃತ್ತ ಪಟ್ಟಿಗೆ ಸೇರಿಸಲು ಬಿಸಿಸಿಐ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿದೆ.
2019ರ ವಿಶ್ವಕಪ್ ಬಳಿಕ ಯಾವುದೇ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಸಕ್ರಿಯಗೊಳ್ಳದ ಮಹಿ, 2020ರ ಆಗಸ್ಟ್ 15 ರಂದು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸಿದ್ದರು. ನಿವೃತ್ತಿಯ ನಂತರವು ಐಪಿಎಲ್‌ನಲ್ಲಿ ಸಕ್ರಿಯರಾಗಿರುವ ಮಹೇಂದ್ರ ಸಿಂಗ್ ಧೋನಿ ಅವರು, ಮುಂಬರುವ 2024ರ ಐಪಿಎಲ್ ನಲ್ಲಿ ಆಡಲು ಸಜ್ಜಾಗುತ್ತಿದ್ದಾರೆ.
ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡುಲ್ಕರ್ ಅವರ ಜೆರ್ಸಿ ನಂ.10ನ್ನು ಬಿಸಿಸಿಐ 2017 ರಲ್ಲಿ ಅಧಿಕೃತವಾಗಿ ನಿವೃತ್ತಿಗೊಳಿಸಿತ್ತು.
ಇನ್ನುಮುಂದೆ ನಂ.7 ಮತ್ತು ಜೆರ್ಸಿ ನಂ.10 ನ್ನು ಚೊಚ್ಚಲ ಪಂದ್ಯ ಆಡುವ ಆಟಗಾರರು ಸೇರಿದಂತೆ ಬೇರಾವ ಆಟಗಾರರಿಗೂ ಇದು ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ತನ್ನ ನಿರ್ಧಾರವನ್ನು ರಾಷ್ಟ್ರೀಯ ತಂಡಕ್ಕೆ ತಿಳಿಸಿದೆ ಎಂದು ವರದಿಯಾಗಿದೆ.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…