ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಕೊನೆಗೂ ಪ್ರತಿಕ್ರಿಯಿಸಿದೆ.
ಐಪಿಎಲ್ ಸಂಪ್ರದಾಯದ ಪ್ರಕಾರ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಶಸ್ತಿ ಪಂದ್ಯವನ್ನು ಆಯೋಜಿಸಬೇಕಿತ್ತು. ಆದರೆ, ಈಗ ಫೈನಲ್ ಪಂದ್ಯ ಮೇ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಪ್ರಕಟಿಸಿದೆ.
ಐಪಿಎಲ್ ಪ್ಲೇಆಫ್ ಮತ್ತು ಫೈನಲ್ ಪಂದ್ಯ ನಡೆಯುವ ಸ್ಥಳಗಳನ್ನು ಘೋಷಿಸಿದಾಗಿನಿಂದ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಲಿ ಚಾಂಪಿಯನ್ ಆಗಿದ್ದರೂ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸುವ ಹಕ್ಕನ್ನು ಏಕೆ ಕಳೆದುಕೊಂಡಿತು ಎಂಬ ಬಗ್ಗೆ ವ್ಯಾಪಕ ಊಹಾಪೋಹಗಳು ಕೇಳಿಬರುತ್ತಿವೆ.
ಬುಧವಾರ ಐಪಿಎಲ್ 2026ರ ಪ್ಲೇಆಫ್ ವೇಳಾಪಟ್ಟಿಯನ್ನು ಘೋಷಿಸುವಾಗ, ಬಿಸಿಸಿಐ ‘ಕೆಲವು ಕಾರ್ಯಾಚರಣೆ ಮತ್ತು ವ್ಯವಸ್ಥಾಪನಾ ಪರಿಗಣನೆಗಳು’ ಮತ್ತು ‘ಬಿಸಿಸಿಐನ ಸ್ಥಾಪಿತ ಮಾರ್ಗಸೂಚಿಗಳು ಮತ್ತು ಪ್ರೋಟೋಕಾಲ್‌ಗಳ ವ್ಯಾಪ್ತಿಯನ್ನು ಮೀರಿದ ಸ್ಥಳೀಯ ಸಂಸ್ಥೆ ಮತ್ತು ಅಧಿಕಾರಿಗಳ ಅವಶ್ಯಕತೆಗಳಿಂದಾಗಿ’ ಈ ಬದಲಾವಣೆಯನ್ನು ಮಾಡಲಾಗಿದೆ ಎಂದು ಮಾತ್ರ ಹೇಳಿತ್ತು. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುರಕ್ಷತಾ ಕಾಳಜಿ ಅಥವಾ ಶಾಸಕರ ಟಿಕೆಟ್ ಸಮಸ್ಯೆಗಳ ಬಗ್ಗೆ ಬಿಸಿಸಿಐಗೆ ಸಮಸ್ಯೆಗಳಿವೆಯೇ ಎಂಬುದು ನಿಗೂಢವಾಗಿಯೇ ಉಳಿದಿತ್ತು. ಇದೀಗ, ಕೆಎಸ್‌ಸಿಎ ಈ ವಿಷಯವನ್ನು ಸಾರ್ವಜನಿಕವಾಗಿ ತಿಳಿಸಿದೆ.
ಈ ಕುರಿತು ಮಾತನಾಡಿರುವ ಕೆಎಸ್‌ಸಿಎ ವಕ್ತಾರ ವಿನಯ್ ಮೃತ್ಯುಂಜಯ, ಸ್ಥಳ ಬದಲಾವಣೆಯ ಹಿಂದೆ ಬಿಸಿಸಿಐನಿಂದ ಯಾವುದೇ ಅಧಿಕೃತ ವಿವರಣೆಯನ್ನು ಸಂಸ್ಥೆಯು ಪಡೆದಿಲ್ಲ ಎಂದಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಏಕೆ ಆಯೋಜಿಸುತ್ತಿಲ್ಲ ಎಂಬುದರ ಕುರಿತು ಯಾವುದೇ ಅಧಿಕೃತ ಸಂವಹನ ಬಂದಿಲ್ಲ. ಆದ್ದರಿಂದ, ನಮಗೆ ಈಗ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಆದರೆ, ಅದು ಬಿಸಿಸಿಐನ ವಿಶೇಷ ಹಕ್ಕು ಮತ್ತು ಬಿಸಿಸಿಐ ತೆಗೆದುಕೊಂಡ ನಿರ್ಧಾರವನ್ನು ನಾನು ಗೌರವಿಸಲು ಇಷ್ಟಪಡುತ್ತೇನೆ ಎಂದು ತಿಳಿಸಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…