ಕ್ರೀಡೆ

ಸಿಲಿಕಾನ್‌ ಸಿಟಿಯಲ್ಲಿ ಮೊಟ್ಟಮೊದಲ ಇಂಟರ್-ಸಿಟಿ ಫುಟ್ಬಾಲ್ ಪಂದ್ಯಾವಳಿ ಆಯೋಜನೆ

ಬೆಂಗಳೂರು: ಸೌತ್‌ ಯುನೈಟೆಡ್‌ ಫುಟ್ಬಾಲ್‌ ಕ್ಲಬ್‌ (SUFC) ವತಿಯಿಂದ ಪ್ರಥಮ ಆವೃತ್ತಿಯ ಇಂಟರ್‌-ಸಿಟಿ ಫುಟ್ಬಾಲ್‌ ಟೂರ್ನಮೆಂಟನ್ನು ಇದೇ ತಿಂಗಳ ಜ.11 ಮತ್ತು 12 ರಂದು ನಗರದ ಹಲಸೂರಿನ ಸೌತ್‌ ಯುನೈಟೆಡ್‌ ಫುಟ್ಬಾಲ್‌ ಕ್ಲಬ್‌ನಲ್ಲಿ ಆಯೋಜಿಸಲಾಗಿದೆ.

ಉದಯೋನ್ಮುಖ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿದೆ. ಸೌತ್‌ ಯುನೈಟೆಡ್‌ ಫುಟ್ಬಾಲ್‌ ಕ್ಲಬ್‌ನ ಬೆಂಗಳೂರು ಮತ್ತು ಪುಣೆ ಕೇಂದ್ರಗಳಿಂದ 6 ವಯೋಮಾನದ ವಿಭಾಗಗಳಲ್ಲಿ (U-7, U-9, U-11 U-13, U-15, U-17) 250ಕ್ಕೂ ಹೆಚ್ಚು ಆಟಗಾರರು ಭಾಗವಹಿಸಲಿದ್ದಾರೆ.

ಈ ಪಂದ್ಯಾವಳಿ ಎರಡು ದಿನಗಳ ಕಾಲ ನಡೆಯಲಿದ್ದು, ಮೊದಲ ದಿನ ರೌಂಡ್‌-ರಾಬಿನ್‌, ಎರಡನೇ ದಿನ ಸೆಮಿಫೈನಲ್‌ ಮತ್ತು ಫೈನಲ್‌ ಪಂದ್ಯಗಳು ನಡೆಯಲಿವೆ. ಜೊತೆಗೆ ಯುವ ಆಟಗಾರರು ಸ್ಪೋರ್ಟಿಂಗ್‌ ಡೈರೆಕ್ಟರ್‌ ಟೆರಿ ಫಿಲನ್‌ ಅವರನ್ನು ಭೇಟಿ ಮಾಡಿ, ಕ್ಲಬ್‌ನ ಹಿರಿಯ ಆಟಗಾರರೊಂದಿಗೆ ಸಂವಹನ ನಡೆಯಲಿದೆ. ‌ಜ.11ರಂದು ಶ್ರೀ ಕಂಠೀರವ ಸ್ಟೇಡಿಯಂನಲ್ಲಿ ನಡೆಯುವ ಬೆಂಗಳೂರು ಎಫ್‌ಸಿ ಮತ್ತು ಮೊಹಮ್ಮದನ್‌ ಎಸ್‌ಸಿ ನಡುವಿನ ಇಂಡಿಯನ್‌ ಸೂಪರ್ ಲೀಗ್‌(ISL) ಪಂದ್ಯ ಕೂಡ ಆಯೋಜಿಸಲಾಗಿದೆ.

ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರಿಗೆ ಸ್ಕಾಲರ್‌ಶಿಪ್‌ಗೆ ಆಯ್ಕೆಯಾಗುವ ಅವಕಾಶವಿದೆ. ಈ ಮೂಲಕ ತಳಮಟ್ಟದ ಮತ್ತು ವೃತ್ತಿಪರ ಅಭಿವೃದ್ದಿಯ ನಡುವಿನ ಅಂತರವನ್ನು ಕಡಿಮೆ ಮಾಡಲು ಹಾಗೂ ಆಟಗಾರರ ಪ್ರಗತಿಗೆ ಸ್ಪಷ್ಟವಾದ ಮಾರ್ಗವನ್ನು ಒದಗಿಸಲು ತರಬೇತಿ ಕಲ್ಪಿಸುವುದಾಗಿದೆ.

ಪಂದ್ಯಾವಳಿ ಆಯೋಜನೆ ಬಗ್ಗೆ ಮಾಹಿತಿ ನೀಡಿದ ಸೌತ್ ಯುನೈಟೆಡ್ ಫುಟ್‌ಬಾಲ್ ಕ್ಲಬ್‌ನ ಸಿಇಒ ಪ್ರಣವ್ ಟ್ರೆಹಾನ್, ಎಸ್‌ಯುಎಫ್‌ಸಿ ಇಂಟರ್-ಸಿಟಿ ಟೂರ್ನಮೆಂಟ್ ಭಾರತದಲ್ಲಿ ತಳಮಟ್ಟದ ಫುಟ್‌ಬಾಲ್ ಆಟಗಾರರನ್ನು ಪ್ರೋತ್ಸಾಹಿಸಿಸುವುದಾಗಿದೆ. ಇದು ಕೇವಲ ಸ್ಪರ್ಧೆಯಲ್ಲ, ಯುವ ಆಟಗಾರರಿಗೆ ಪಂದ್ಯದ ಅನುಭವವನ್ನು ಪಡೆಯಲು ಮತ್ತು ಚಿಕ್ಕ ವಯಸ್ಸಿನಿಂದಲೇ ತಂತ್ರಗಳನ್ನು ಕಲಿಯಲು ಅವಕಾಶಗಳನ್ನು ಸೃಷ್ಟಿಸುವುದಾಗಿದೆ ಎಂದರು.

ಪ್ರತಿಭಾವಂತ ಕ್ರೀಡಾಪಟುಗಳ ಉಜ್ವಲ ಭವಿಷ್ಯಕ್ಕಾಗಿ ವೇದಿಕೆಯನ್ನು ಸಿದ್ಧಪಡಿಸುವ ಅತ್ಯುತ್ತಮ ಫುಟ್‌ಬಾಲ್, ಶಿಕ್ಷಣ ಮತ್ತು ಸಮುದಾಯ-ನಿರ್ಮಾಣವನ್ನು ಒಟ್ಟುಗೂಡಿಸುವ ವೇದಿಕೆಯನ್ನು ಒದಗಿಸಲು ನಾವು ಉತ್ಸುಕರಾಗಿದ್ದೇವೆ.
ಪಂದ್ಯಾವಳಿಯ ಭಾಗವಾಗಿ, SUFCಯ ಮುಖ್ಯ ಸ್ಕೌಟ್ ಮತ್ತು ವಿಶ್ಲೇಷಕ, ಇಂದ್ರೇಶ್ ನಾಗರಾಜನ್ ಆಟಗಾರರಿಗೆ ವಿಶೇಷ ಕಾರ್ಯಗಾರವನ್ನು ನಡೆಸಲಿದ್ದು, ವೀಡಿಯೊ ವಿಶ್ಲೇಷಣೆಯನ್ನು ಬಳಸಿಕೊಂಡು ಪ್ರಮುಖ ಫುಟ್‌ಬಾಲ್ ಪರಿಕಲ್ಪನೆಗಳನ್ನು ಅರ್ಥಮಾಡಿಸಲಿದ್ದಾರೆ. ಈ ಕಾರ್ಯಾಗಾರವು ಆಟಗಾರರ ವೀಕ್ಷಣೆ, ಪ್ರತಿಬಿಂಬ ಮತ್ತು ಕಾರ್ಯಕ್ಷಮತೆಯ ಕೌಶಲ್ಯಗಳನ್ನು ಸುಧಾರಿಸುವ ಮೂಲಕ ಅವರ ಕಲಿಕೆಯನ್ನು ಹೆಚ್ಚಿಸಲು ಸಹಾಯ ಮಾಡಲಿದೆ ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

2 hours ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

2 hours ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

2 hours ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

3 hours ago

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

13 hours ago