ದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2023ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 77 ರನ್ ಅಂತರದ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ.
ಈ ಮೂಲಕ ಗುಜರಾತ್ ಟೈಟನ್ಸ್ ಬಳಿಕ ಪ್ಲೇ ಆಫ್‌ಗೆ ಪ್ರವೇಶಿಸಿದ ಎರಡನೇ ತಂಡವೆನಿಸಿದೆ.
ಇದು ಮಹೇಂದ್ರ ಸಿಂಗ್ ಧೋನಿ ಅವರ ಕೊನೆಯ ಐಪಿಎಲ್ ಎಂದೇ ಅಂದಾಜಿಸಲಾಗಿದೆ. ಈಗ ಮಹಿ ನಾಯಕತ್ವದಲ್ಲಿ ಪ್ಲೇ ಆಫ್‌ಗೆ ಲಗ್ಗೆ ಇಟ್ಟಿರುವ ಸಿಎಸ್‌ಕೆ ಮಗದೊಂದು ಟ್ರೋಫಿ ಮೇಲೆ ಕಣ್ಣಿಟ್ಟಿದೆ.
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಟಾಸ್ ಗೆದ್ದ ಚೆನ್ನೈ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 223 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು.
ಚೆನ್ನೈ ಪರ ಆರಂಭಿಕ ಬ್ಯಾಟರ್‌ಗಳಾದ ಡೆವೊನ್ ಕಾಸ್ಟೇ 52 ಎಸೆತಗಳಲ್ಲಿ 11 ಬೌಂಡರಿ, 3 ಸಿಕ್ಸರ್ ಸಮೇತ 87 ರನ್ ಗಳಿಸಿದರು. ಋತುರಾಜ್ ಗಾಯಕವಾಡ್ 50 ಎಸೆತಗಳಲ್ಲಿ 7 ಸಿಕ್ಸರ್, 3 ಬೌಂಡರಿ ಸಹಿತ 79 ರನ್ ಗಳಿಸಿ ಮಿಂಚಿದರು.
ಇತ್ತ ಶಿವಂ ದುಬೆ 9 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 22 ರನ್ ಗಳಿಸಿದರೆ, ರವೀಂದ್ರ ಜಡೇಜ 7 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಮೇತ 200 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಟೆ ಹಾಗೂ ಚೇತನ್ ಜಕಾರಿಯಾ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಚೆನ್ನೈ ನೀಡಿದ ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಡೆಲ್ಲಿ ನಾಯಕ ಡೇವಿಡ್ ವಾರ್ನರ್ ಅರ್ಧಶತಕದ (86) ಹೊರತಾಗಿಯೂ ಒಂಬತ್ತು ವಿಕೆಟ್ ನಷ್ಟಕ್ಕೆ 149 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಉಳಿದಂತೆ ಬೇರಾವ ಆಟಗಾರರಿಂದಲೂ ನಿರೀಕ್ಷಿತ ಜೊತೆಯಾಟ ಕಾಣಲಿಲ್ಲ.
ಸಿಎಸ್‌ಕೆ ಪರ ದೀಪಕ್ ಚಾಹರ್ ಮೂರು ವಿಕೆಟ್ ಗಳಿಸಿದರು.
ಪಂದ್ಯಶ್ರೇಷ್ಠ: ಋತುರಾಜ್ ಗಾಯಕ್ವಾಡ್
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…