ಕ್ರೀಡೆ

ಚೆನ್ನೈ ಸೂಪರ್​ ಕಿಂಗ್ಸ್​ಗೆ ಭರ್ಜರಿ ಜಯ: ಪ್ಲೇಆಫ್​ಗೆ ಎಂಟ್ರಿಕೊಟ್ಟ ಧೋನಿ ಬಾಯ್ಸ್

ದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2023ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 77 ರನ್ ಅಂತರದ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ.

ಈ ಮೂಲಕ ಗುಜರಾತ್ ಟೈಟನ್ಸ್ ಬಳಿಕ ಪ್ಲೇ ಆಫ್‌ಗೆ ಪ್ರವೇಶಿಸಿದ ಎರಡನೇ ತಂಡವೆನಿಸಿದೆ.

ಇದು ಮಹೇಂದ್ರ ಸಿಂಗ್‌ ಧೋನಿ ಅವರ ಕೊನೆಯ ಐಪಿಎಲ್ ಎಂದೇ ಅಂದಾಜಿಸಲಾಗಿದೆ. ಈಗ ಮಹಿ ನಾಯಕತ್ವದಲ್ಲಿ ಪ್ಲೇ ಆಫ್‌ಗೆ ಲಗ್ಗೆ ಇಟ್ಟಿರುವ ಸಿಎಸ್‌ಕೆ ಮಗದೊಂದು ಟ್ರೋಫಿ ಮೇಲೆ ಕಣ್ಣಿಟ್ಟಿದೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಟಾಸ್ ಗೆದ್ದ ಚೆನ್ನೈ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 223 ರನ್‌ಗಳ ಬೃಹತ್‌ ಮೊತ್ತ ದಾಖಲಿಸಿತು.

ಚೆನ್ನೈ ಪರ ಆರಂಭಿಕ ಬ್ಯಾಟರ್‌ಗಳಾದ ಡೆವೊನ್‌ ಕಾಸ್ಟೇ 52 ಎಸೆತಗಳಲ್ಲಿ 11 ಬೌಂಡರಿ, 3 ಸಿಕ್ಸರ್ ಸಮೇತ 87 ರನ್ ಗಳಿಸಿದರು. ಋತುರಾಜ್ ಗಾಯಕವಾಡ್ 50 ಎಸೆತಗಳಲ್ಲಿ 7 ಸಿಕ್ಸರ್, 3 ಬೌಂಡರಿ ಸಹಿತ 79 ರನ್ ಗಳಿಸಿ ಮಿಂಚಿದರು.

ಇತ್ತ ಶಿವಂ ದುಬೆ 9 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 22 ರನ್ ಗಳಿಸಿದರೆ, ರವೀಂದ್ರ ಜಡೇಜ 7 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಮೇತ 200 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಟೆ ಹಾಗೂ ಚೇತನ್ ಜಕಾರಿಯಾ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಚೆನ್ನೈ ನೀಡಿದ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಡೆಲ್ಲಿ ನಾಯಕ ಡೇವಿಡ್ ವಾರ್ನರ್ ಅರ್ಧಶತಕದ (86) ಹೊರತಾಗಿಯೂ ಒಂಬತ್ತು ವಿಕೆಟ್ ನಷ್ಟಕ್ಕೆ 149 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಉಳಿದಂತೆ ಬೇರಾವ ಆಟಗಾರರಿಂದಲೂ ನಿರೀಕ್ಷಿತ ಜೊತೆಯಾಟ ಕಾಣಲಿಲ್ಲ.

ಸಿಎಸ್‌ಕೆ ಪರ ದೀಪಕ್ ಚಾಹರ್ ಮೂರು ವಿಕೆಟ್ ಗಳಿಸಿದರು.

ಪಂದ್ಯಶ್ರೇಷ್ಠ: ಋತುರಾಜ್‌ ಗಾಯಕ್ವಾಡ್‌

andolanait

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago