ಕ್ರೀಡೆ

ಪಿಂಕ್‌ ಬಾಲ್‌ ಟೆಸ್ಟ್: ಅಧಿಕೃತವಾಗಿ ಪ್ಲೇಯಿಂಗ್‌ 11 ಘೋಷಿಸಿದ ಆಸ್ಟ್ರೇಲಿಯಾ

ಅಡಿಲೇಡ್:‌ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯ ಎರಡನೇ ಪಂದ್ಯವು ನಾಳೆ ( ಡಿ.6 ) ಅಡಿಲೇಡ್‌ನಲ್ಲಿ ಆರಂಭವಾಗಲಿದ್ದು, ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಇಂಡಿಯಾ ವಿರುದ್ಧ 295 ರನ್‌ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿದ್ದ ಆಸ್ಟ್ರೇಲಿಯಾ ಸೇಡು ತೀರಿಸಿಕೊಳ್ಳಲು ಕಾತರವಾಗಿದೆ.

ಶುಕ್ರವಾರ ಆರಂಭವಾಗಲಿರುವ ಪಿಂಕ್‌ ಬಾಲ್‌ ಟೆಸ್ಟ್‌ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ಆಡುವ ಇಲವೆನ್‌ ಆಟಗಾರರನ್ನು ಘೋಷಿಸಿದೆ. ಈ ಪಂದ್ಯದಲ್ಲಿ ಒಂದು ಬದಲಾವಣೆ ಮಾಡಿದ್ದು ಹೇಜಲ್‌ವುಡ್ ಸ್ಥಾನಕ್ಕೆ ಸ್ಕಾಟ್‌ ಬೋಲ್ಯಾಂಡ್‌ ಸೇರ್ಪಡೆಯಾಗಿದ್ದಾರೆ.

ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಜೋಶ್‌ ಹೇಜಲ್‌ವುಡ್ ಗಾಯವಾಗಿ ಹೊರಗುಳಿದಿದ್ದು, ಅವರ ಸ್ಥಾನಕ್ಕೆ ಸ್ಕಾಟ್‌ ಬೋಲ್ಯಾಂಡ್‌ ಸೇರ್ಪಡೆಯಾಗಿದ್ದಾರೆ.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಪರ ಆರಂಭಿಕರಾಗಿ ಉಸ್ಮಾನ್‌ ಖ್ವಾಜಾ ಹಾಗೂ ನಾಥನ್‌ ಮೆಕ್‌ಸ್ವೀನಿ ಇನ್ನಿಂಗ್ಸ್‌ ಆರಂಭಿಸಲಿದ್ದು, ನಂತರದ ಬ್ಯಾಟರ್‌ಗಳಾಗಿ ಮಾರ್ನಶ್‌ ಲಬುಶೇನ್‌, ಸ್ಟೀವ್‌ ಸ್ಮಿತ್‌ ಆಡಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಟ್ರಾವಿಸ್‌ ಹೆಡ್‌, ವಿಕೆಟ್‌ ಕೀಪರ್‌ ಅಲೆಕ್ಸ್‌ ಕ್ಯಾರಿ ಬ್ಯಾಟ್‌ ಬೀಸಲಿದ್ದಾರೆ.

ಬೌಲಿಂಗ್‌ ವಿಭಾಗದಲ್ಲಿ ವೇಗಿಗಳಾಗಿ ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್‌, ಸ್ಕಾಟ್‌ ಬೋಲ್ಯಾಂಡ್ ತಮ್ಮ ಕರಾಮತ್ತು ತೋರಿಸಲು ಸಜ್ಜಾಗಿದ್ದು ಸ್ಪೀನ್‌ ವಿಭಾಗದಲ್ಲಿ ನಾಥನ್‌ ಲಿಯಾನ್‌ ಇದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್‌ ಇಲವೆನ್‌: ಉಸ್ಮಾನ್‌ ಖ್ವಾಜಾ, ನಾಥನ್‌ ಮೆಕ್‌ಸ್ವೀನಿ, ಮಾರ್ನಸ್‌ ಲಾಬುಶೇನ್‌,ಸ್ಟೀವ್‌ ಸ್ಮಿತ್‌, ಟ್ರಾವಿಸ್‌ ಹೆಡ್‌, ಮಿಚ್‌ ಮಾರ್ಷ್‌, ಅಲೆಕ್ಸ್‌ ಕ್ಯಾರಿ(ವಿಕೆಟ್‌ ಕೀಪರ್)‌, ಪ್ಯಾಟ್‌ ಕಮಿನ್ಸ್ (ನಾಯಕ), ಮಿಚೆಲ್‌ ಸ್ಟಾರ್ಕ್‌, ನಾಥನ್‌ ಲಿಯಾನ್‌, ಸ್ಕಾಟ್‌ ಬೋಲ್ಯಾಂಡ್

andolana

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

2 mins ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

19 mins ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

2 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

4 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

7 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

7 hours ago