ಕ್ರೀಡೆ

ಅಡಿಲೇಡ್‌ ಟೆಸ್ಟ್: ಸ್ಟಾರ್ಕ್‌ ಬೌಲಿಂಗ್‌ ದಾಳಿ ತತ್ತರಿಸಿದ ಭಾರತ; 180 ರನ್‌ಗೆ ಆಲ್‌ಔಟ್‌

ಅಡಿಲೇಡ್:‌ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್‌ (ಹಗಲು-ರಾತ್ರಿ) ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 180 ರನ್‌ಗಳಿಗೆ ಆಲೌಟ್‌ ಆಗಿದೆ. ಮಿಚೆಲ್‌ ಸ್ಟಾರ್ಕ್‌ 6 ವಿಕೆಟ್‌ ಉರುಳಿಸುವ ಮೂಲಕ ಭಾರತದ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದಾರೆ.

ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಬ್ಯಾಟಿಂಗ್‌ ಆಯ್ದುಕೊಂಡರು. ಪರ್ತ್‌ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಕೆಎಲ್‌ ರಾಹುಲ್‌ ಮತ್ತು ಯಶಸ್ವಿ ಜೈಸ್ವಾಲ್‌ ಆರಂಭಿಕ ಜೋಡಿ ಈ ಬಾರಿ ವಿಫಲವಾಯಿತು. ಯಶಸ್ವಿ ಜೈಸ್ವಾಲ್‌ ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಸೊನ್ನೆ ಸುತ್ತಿದ ಹಾಗೆ ಇಲ್ಲೂ ಸ್ಟಾರ್ಕ್‌ಗೆ ವಿಕೆಟ್‌ ಒಪ್ಪಿಸುವ ಮೂಲಕ ಮೊದಲ ಎಸೆತದಲ್ಲೇ ಔಟಾದರು.

ನಂತರ ಶುಭಮನ್‌ ಗಿಲ್‌ 31 ಹಾಗೂ ಕೆಎಲ್‌ ರಾಹುಲ್‌ 37 ರನ್‌ಗಳ ಕಾಣಿಕೆ ಜೊತೆಗೆ 69 ರನ್‌ಗಳ ಜೊತೆಯಾಟವನ್ನು ಆಡಿದರು. ಕೆಎಲ್‌ ರಾಹುಲ್‌ ವಿಕೆಟ್‌ ಪತನದ ಬಳಿಕ ನಂತರದ ಬ್ಯಾಟರ್‌ಗಳ ಪೆವಿಲಿಯನ್‌ ಪರೇಡ್‌ ಶುರುವಾಯಿತು.

ವಿರಾಟ್‌ ಕೊಹ್ಲಿ (7) ಕ್ರೀಸ್‌ಗೆ ಬಂದ ಕೂಡಲೇ ಕೆಟ್ಟ ಹೊಡೆತಕ್ಕೆ ಕೈ ಹಾಕಿ ಸ್ಟೀವ್‌ ಸ್ಮಿತ್‌ಗೆ ಕ್ಯಾಚ್‌ ನೀಡಿ ಔಟಾದರು. ಬಳಿಕ‌ ಬಂದ ರೋಹಿತ್‌ (3) ಕೂಡ ಬಂದ ದಾರಿಗೆ ಶುಂಕವಿಲ್ಲ ಎಂಬಂತೆ ಕೊಹ್ಲಿ ಹಾದಿ ಹಿಡಿದರು. ನಂತರ ವಿಕೆಟ್‌ ಕೀಪರ್‌ ರಿಷಭ್‌ ಪಂತ್ ಸ್ವಲ್ಪ ಭರವಸೆ ಮೂಡಿಸಿದರು ಆದರೆ ಕಮಿನ್ಸ್‌ ಬಾಲ್‌ನಲ್ಲಿ 21 ರನ್‌ಗಳಿಸಿ ಔಟಾದರು.

ಭಾರತದ ಬ್ಯಾಟರ್‌ಗಳ ವಿಫಲದಿಂದ 6 ವಿಕೆಟ್‌ಗಳ ನಷ್ಟಕ್ಕೆ 109 ರನ್‌ಗಳಿಸಿ ಸಂಕಷ್ಟದಲ್ಲಿದ್ದ ತಂಡಕ್ಕೆ 7ನೇ ಕ್ರಮಾಂಕದಲ್ಲಿ ಆಡಲು ಬಂದ ಆಲ್‌ರೌಂಡರ್‌ ನಿತೀಶ್‌ ರೆಡ್ಡಿ ಆಸರೆಯಾದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಹಿತ 42 ರನ್‌ಗಳ ಸ್ಪೋಟಕ ಬ್ಯಾಟಿಂಗ್‌ ಮಾಡಿದರು. ಇದರಿಂದ ಇಂಡಿಯಾ ಹೀನಾಯ ಮೊತ್ತಕ್ಕೆ ಆಲ್‌ಔಟ್‌ ಆಗುವುದರಿಂದ ಪಾರು ಮಾಡಿದರು.

ಆಸ್ಟ್ರೇಲಿಯಾದ ಪರ ಅದ್ಭುತ ಬೌಲಿಂಗ್‌ ಮಾಡಿದ ಮಿಚೆಲ್‌ ಸ್ಟಾರ್ಕ್‌ ಕೇವಲ 48 ರನ್‌ ನೀಡಿ 6 ವಿಕೆಟ್‌ ಪಡೆದರು. ಉಳಿದಂತೆ ಪ್ಯಾಟ್‌ ಕಮಿನ್ಸ್‌ ಹಾಗೂ ಸ್ಕಾಟ್‌ ಬೋಲ್ಯಾಂಡ್‌ ತಲಾ 2 ವಿಕೆಟ್‌ ಕಬಳಿಸಿದರು.

andolana

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

3 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

3 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

3 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

4 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

4 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

5 hours ago