ಬ್ರಿಸ್ಬೇನ್: ಆಸ್ಟ್ರೇಲಿಯಾ ಮತ್ತು ಇಂಡಿಯಾ ನಡುವಿನ ಬಾರ್ಡರ್-ಗವಸ್ಕಾರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದ ರದ್ದಾಗಿದೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಆಯ್ದುಕೊಂಡರು. ಇದಕ್ಕನುಗುಣವಾಗಿ ಬ್ಯಾಟಿಂಗ್‌ಗೆ ಇಳಿದ ಆಸ್ಟ್ರೇಲಿಯಾದ ಬ್ಯಾಟರ್‌ಗಳು 13.2 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 28 ರನ್‌ಗಳಿಸಿ ಆಡುತ್ತಿದ್ದ ವೇಳೆ ಮಳೆ ಬಂದ ಕಾರಣ ದಿನದಾಟ ರದ್ದಾಗಿದೆ.
ಆಸ್ಟ್ರೇಲಿಯಾದ ಬ್ಯಾಟರ್‌ಗಳಾದ ಉಸ್ಮಾನ್ ಖವಾಜಾ 19(47), ನಥನ್ 4(33) ರನ್‌ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ಇನ್ನು ಭಾರತ ತನ್ನ ಆಡುವ ಬಳಗದಲ್ಲಿ ಎರಡು ಬದಲಾವಣೆ ಮಾಡಿದ್ದು, ಹರ್ಷಿತ್ ರಾಣಾ ಅವರ ಬದಲಿಗೆ ಆಕಾಶ್ ದೀಪ್ ಹಾಗೂ ರವಿಚಂದ್ರನ್ ಅಶ್ವಿನ್ ಬದಲಿಗೆ ಜಡೇಜಾ ಅವರು ಈ ಪಂದ್ಯದಲ್ಲಿ ಕಣಕ್ಕೆ ಇಳಿದಿದ್ದಾರೆ.





