ಕ್ಯಾನ್‌ಬೆರಾ: ಆಸ್ಟ್ರೇಲಿಯಾ ವಿರುದ್ಧದ ಪಿಂಕ್‌ಬಾಲ್ (ಹಗಲು-ರಾತ್ರಿ) ಟೆಸ್ಟ್‌ಗಾಗಿ ಸಿದ್ಧತೆ ನಡೆಸುತ್ತಿರುವ ಭಾರತ ತಂಡವು ಅಭ್ಯಾಸ ಪಂದ್ಯದಲ್ಲಿ ಉತ್ತಮ ಆರಂಭ ನೀಡಿದೆ.
ಆಸ್ಟ್ರೇಲಿಯಾ ಪ್ರೈಮ್ ಮಿನಿಸ್ಟರ್ಸ್ ಇಲವೆನ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ, ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ದುಕೊಂಡರು. ಇನ್ನಿಂಗ್ಸ್ ಆರಂಭಿಸಿದ ಅತಿಥೇಯ ಆಸ್ಟ್ರೇಲಿಯಾಗೆ ಮಹಮ್ಮದ್ ಸಿರಾಜ್ ಆರಂಭದಲ್ಲೇ ಅಘಾತ ನೀಡಿದ್ದಾರೆ.
ಸ್ಯಾಮ್ ಕಾನ್ಸ್‌ಟಾಸ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಮ್ಯಾಟ್ ರೆನ್‌ಶಾ ಕೇವಲ 5 ರನ್ ಗಳಿಸಿ ಮೊಹಮ್ಮದ್ ಸಿರಾಜ್‌ಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಜೇಡನ್ ಗುಡ್‌ವಿನ್ 4 ರನ್, ಆಕಾಶ್ ದೀಪ್ ಬೌಲಿಂಗ್‌ನಲ್ಲಿ ಪೆವಿಲಿಯನ್ ಹಾದಿ ಹಿಡಿದರು.
5.3 ಓವರ್‌ಗಳಾಗಿದ್ದಾಗ ಮಳೆ ಸುರಿದ ಕಾರಣ, ಪಂದ್ಯ ಕೆಲ ಹೊತ್ತು ನಿಂತಿತ್ತು. ನಂತರ ಪುನಃ ಇನ್ನಿಂಗ್ಸ್ ಆರಂಭಿಸಿದ ಅಸ್ಟ್ರೇಲಿಯಾ ತಂಡವು ದಿನದ ಅಂತ್ಯಕ್ಕೆ 7 ಓವರ್‌ಗಳಲ್ಲಿ 2 ವಿಕೆಟ್‌ಗೆ 22ರನ್ ಗಳಿಸಿದೆ.
ಪಂದ್ಯ ಆರಂಭವಾಗುವ ಮೊದಲೇ ಸಂಪೂರ್ಣವಾಗಿ ಮಳೆ ಸುರಿದ ಕಾರಣ ಮೊದಲ ದಿನದ ಆಟ ರದ್ದಾಗಿತ್ತು. ಹೀಗಾಗಿ, ಇಂದು 50 ಓವರ್‌ಗಳಿಗೆ ಮಾತ್ರ ಪಂದ್ಯ ನಡೆಯುತ್ತಿದೆ. ಅತಿಥೇಯ ಆಸ್ಟ್ರೇಲಿಯಾ ತಂಡವನ್ನು ಜಾಕ್ ಎಡ್ವರ್ಡ್ಸ್ ಮುನ್ನಡೆಸುತ್ತಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…