ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದ ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 54ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪವಾರ್ ಪ್ರೀಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ.
ವಿಯೇಟ್ನಾಂನ ವೋ ಥಿ ಕೀಮ್ ಅನ್ಹ್ ವಿರುದ್ಧ ಶನಿವಾರ ತಡರಾತ್ರಿ ನಡೆದ ಸ್ಪರ್ಧೆಯಲ್ಲಿ 5-0 ಅಂತರದಲ್ಲಿ ಗೆಲುವು ದಾಖಲಿಸುವ ಮೂಲಕ ತಮ್ಮ ಚೊಚ್ಚಲ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪ್ರಾಬಲ್ಯ ಮೆರೆದಿದ್ದಾರೆ.
ಪ್ರೀತಿ ಅವರು ಮಂಗಳವಾರ ನಡೆಯಲಿರುವ 16ನೇ ಸುತ್ತಿನಲ್ಲಿ ಕೊಲಂಬಿಯಾದ ಮಾರ್ಕೆಲಾ ಅವರೊಂದಿಗೆ ಪೈಪೋಟಿ ನಡೆಸಲಿದ್ದಾರೆ.
ಹರಿಯಾಣದ 20 ವರ್ಷ ಬಾಕ್ಸರ್ ಅಗಿರುವ ಪ್ರೀತಿ ಪವಾರ್ ಅವರು ಕಳೆದ ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಇನ್ನು 2024ರ ಪ್ಯಾರಿಸ್ ಒಲಂಪಿಕ್ಸ್ ಪ್ರೀತಿ ಅವರಿಗೆ ಚೊಚ್ಚಲ ಒಲಂಪಿಕ್ಸ್ ಆಗಿದೆ.





