ಕ್ರೀಡೆ

Paris Olympics 2024: ಬಾಕ್ಸಿಂಗ್‌ನಲ್ಲಿ ಪ್ರೀ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟ ಪ್ರೀತಿ

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ ಕ್ರೀಡಾಕೂಟದ ಬಾಕ್ಸಿಂಗ್‌ ಸ್ಪರ್ಧೆಯ ಮಹಿಳೆಯರ 54ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪವಾರ್‌ ಪ್ರೀಕ್ವಾರ್ಟರ್‌ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ.

ವಿಯೇಟ್ನಾಂನ ವೋ ಥಿ ಕೀಮ್‌ ಅನ್ಹ್‌ ವಿರುದ್ಧ ಶನಿವಾರ ತಡರಾತ್ರಿ ನಡೆದ ಸ್ಪರ್ಧೆಯಲ್ಲಿ 5-0 ಅಂತರದಲ್ಲಿ ಗೆಲುವು ದಾಖಲಿಸುವ ಮೂಲಕ ತಮ್ಮ ಚೊಚ್ಚಲ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಪ್ರಾಬಲ್ಯ ಮೆರೆದಿದ್ದಾರೆ.

ಪ್ರೀತಿ ಅವರು ಮಂಗಳವಾರ ನಡೆಯಲಿರುವ 16ನೇ ಸುತ್ತಿನಲ್ಲಿ ಕೊಲಂಬಿಯಾದ ಮಾರ್ಕೆಲಾ ಅವರೊಂದಿಗೆ ಪೈಪೋಟಿ ನಡೆಸಲಿದ್ದಾರೆ.

ಹರಿಯಾಣದ 20 ವರ್ಷ ಬಾಕ್ಸರ್‌ ಅಗಿರುವ ಪ್ರೀತಿ ಪವಾರ್‌ ಅವರು ಕಳೆದ ಏಷ್ಯನ್‌ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಇನ್ನು 2024ರ ಪ್ಯಾರಿಸ್‌ ಒಲಂಪಿಕ್ಸ್‌ ಪ್ರೀತಿ ಅವರಿಗೆ ಚೊಚ್ಚಲ ಒಲಂಪಿಕ್ಸ್‌ ಆಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

2 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

2 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

2 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

2 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

3 hours ago