ಕ್ರೀಡೆ

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಸೇರಿದ ಬುಮ್ರಾ

ನವದೆಹಲಿ: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡಕ್ಕೆ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾರನ್ನು ಸೇರಿಸಲಾಗಿದೆ. ಬೆನ್ನು ನೋವು ಮತ್ತು ಒತ್ತಡದ ಕಾರಣದಿಂದಾಗಿ ಕಳೆದ ಸೆಪ್ಟೆಂಬರ್‌ನಿಂದ ತಂಡದಿಂದ ಹೊರಗುಳಿದಿದ್ದರು. ಅಲ್ಲದೇ ಟಿ20 ವಿಶ್ವಕಪ್​ಗೂ ಅಲಭ್ಯರಾಗಿದ್ದರು. ಅಂದಿನಿಂದ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆದು, ಫಿಟ್​ನೆಸ್​ಗಾಗಿ ಶ್ರಮಿಸುತ್ತಿದ್ದರು.

ಬಾಂಗ್ಲಾದೇಶದ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ಕ್ಷೇತ್ರ ರಕ್ಷಣೆಯಲ್ಲಿ ರೋಹಿತ್​ ಶರ್ಮಾ ಹೆಬ್ಬೆರಳಿಗೆ ಗಾಯವಾಗಿತ್ತು. ಢಾಕಾದಿಂದ ನೇರವಾಗಿ ಭಾರತಕ್ಕೆ ಬಂದಿದ್ದ ಶರ್ಮಾ ಚಿಕಿತ್ಸೆ ಪಡೆದಿದ್ದರು. ನಂತರದ ಪಂದ್ಯಗಳ ನಾಯಕತ್ವ ಕೆ.ಎಲ್.ರಾಹುಲ್​ಗೆ ನೀಡಲಾಗಿತ್ತು. ಅವರು ಟೆಸ್ಟ್ ಸರಣಿಯನ್ನೂ ಮುನ್ನಡೆಸಿದ್ದರು. ಲಂಕಾ ವಿರುದ್ಧದ ಟಿ20ಗೆ ಹಾರ್ದಿಕ್​ಗೆ ನಾಯಕತ್ವ ಹೊಣೆ ನೀಡಲಾಗಿದ್ದು, ಏಕದಿನ ಪಂದ್ಯಗಳಿಗೆ ಮತ್ತೆ ರೋಹಿತ್ ನಾಯಕತ್ವ ವಹಿಸಲಿದ್ದಾರೆ.16 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಡಿಸೆಂಬರ್ 27ರಂದು ಪ್ರಕಟಿಸಿತ್ತು. ನಂತರದಲ್ಲಿ ಬುಮ್ರಾ ತಂಡದಲ್ಲಿ ಸ್ಥಾನ ಪಡೆಯಲಿಲ್ಲ. ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯ ಗುವಾಹಟಿಯಲ್ಲಿ, ಎರಡನೇ ಪಂದ್ಯ ಕೋಲ್ಕತ್ತಾದ ಈಡನ್ಸ್ ಗಾರ್ಡನ್‌ ಮತ್ತು ಮೂರನೇ ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದೆ.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

7 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

8 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

9 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

12 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

13 hours ago