ಮೆಲ್ಬೋರ್ನ್: ಭಾರತದ ಕ್ರಿಕೆಟ್ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಮ್ಮ 44ನೇ ಟೆಸ್ಟ್ ಪಂದ್ಯದಲ್ಲಿ 200 ವಿಕೆಟ್‌ಗಳ ಸ್ಮರಣೀಯ ಸಾಧನೆ ಮಾಡಿದ್ದಾರೆ.
ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಎಡಗೈ ಬ್ಯಾಟರ್ ಟ್ರಾವಿಸ್ ಹೆಡ್ ಅವರ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 200 ವಿಕೆಟ್‌ಗಳ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಬೌಲರ್ ಎಂಬ ಗೌರವಕ್ಕೆ ಜಸ್ಪ್ರೀತ್ ಬುಮ್ರಾ ಭಾಜನರಾದರು. ಹಾಗೇಯೇ ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಗಳಿಸಿದ ಭಾರತದ 12ನೇ ಬೌಲರ್ ಎನಿಸಿದ್ದಾರೆ.
ಕಡಿಮೆ ಎಸೆತಗಳಲ್ಲಿ 200 ವಿಕೆಟ್‌ಗಳ ಸಾಧನೆ ಮಾಡಿದ ಬೌಲರ್‌ಗಳು
ವಕಾರ್ ಯೂನಿಸ್: 7,725 ಎಸೆತಗಳು
ಡೇಲ್ ಸ್ಟೇನ್: 7,948 ಎಸೆತಗಳು
ಕಗಿಸೊ ರಬಾಡ: 8,153 ಎಸೆತಗಳು
ಜಸ್ಪ್ರಿತ್ ಬುಮ್ರಾ: 8,484 ಎಸೆತಗಳು
ಮಾಲ್ಕಮ್ ಮಾರ್ಷಲ್: 9,234 ಎಸೆತಗಳು





