ಕ್ರೀಡೆ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಕಡಿಮೆ ಎಸೆತಗಳಲ್ಲಿ 200 ವಿಕೆಟ್‌ಗಳ ಸ್ಮರಣೀಯ ಸಾಧನೆ ಮಾಡಿದ ಬುಮ್ರಾ

ಮೆಲ್ಬೋರ್ನ್‌: ಭಾರತದ ಕ್ರಿಕೆಟ್‌ ತಂಡದ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ತಮ್ಮ 44ನೇ ಟೆಸ್ಟ್‌ ಪಂದ್ಯದಲ್ಲಿ 200 ವಿಕೆಟ್‌ಗಳ ಸ್ಮರಣೀಯ ಸಾಧನೆ ಮಾಡಿದ್ದಾರೆ.

ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾದ ಎಡಗೈ ಬ್ಯಾಟರ್‌ ಟ್ರಾವಿಸ್‌ ಹೆಡ್‌ ಅವರ ವಿಕೆಟ್‌ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 200 ವಿಕೆಟ್‌ಗಳ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಬೌಲರ್‌ ಎಂಬ ಗೌರವಕ್ಕೆ ಜಸ್ಪ್ರೀತ್‌ ಬುಮ್ರಾ ಭಾಜನರಾದರು. ಹಾಗೇಯೇ ಟೆಸ್ಟ್‌ ಕ್ರಿಕೆಟ್‌ನಲ್ಲಿ 200 ವಿಕೆಟ್‌ ಗಳಿಸಿದ ಭಾರತದ 12ನೇ ಬೌಲರ್‌ ಎನಿಸಿದ್ದಾರೆ.

ಕಡಿಮೆ ಎಸೆತಗಳಲ್ಲಿ 200 ವಿಕೆಟ್‌ಗಳ ಸಾಧನೆ ಮಾಡಿದ ಬೌಲರ್‌ಗಳು

ವಕಾರ್‌ ಯೂನಿಸ್‌: 7,725 ಎಸೆತಗಳು

ಡೇಲ್‌ ಸ್ಟೇನ್‌: 7,948 ಎಸೆತಗಳು

ಕಗಿಸೊ ರಬಾಡ: 8,153 ಎಸೆತಗಳು

ಜಸ್ಪ್ರಿತ್‌ ಬುಮ್ರಾ: 8,484 ಎಸೆತಗಳು

ಮಾಲ್ಕಮ್‌ ಮಾರ್ಷಲ್‌: 9,234 ಎಸೆತಗಳು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago