ಕ್ರೀಡೆ

ಎಂದೆಂದಿಗೂ ಆಟಗಾರನಾಗಿರಲು, ಆಡಳಿತಾಧಿಕಾರಿಯಾಗಿರಲು ಸಾಧ್ಯವಿಲ್ಲ : ಗಂಗೂಲಿ

ನವದೆಹಲಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅಧಿಕಾರವಧಿ ಮುಗಿಯುತ್ತಾ ಬಂದಿದೆ. ಇದರ ಬೆನ್ನಲ್ಲೇ ದಾದಾ, ಎರಡನೇ ಅವಧಿಗೆ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸದಿರಲು ತೀರ್ಮಾನಿಸಿದ್ದು, ಕರ್ನಾಟಕ ಮೂಲದ ರೋಜರ್ ಬಿನ್ನಿ, ಬಿಸಿಸಿಐ ಅಧ್ಯಕ್ಷರಾಗಿ ನೇಮಕವಾಗುವುದು ಬಹುತೇಕ ಖಚಿತ ಎನಿಸಿದೆ.

ಸೌರವ್ ಗಂಗೂಲಿ ಎರಡನೇ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗಿ ಮುಂದುವರೆಯಲು ಇಷ್ಟವಿತ್ತು, ಆದರೆ ಬಿಸಿಸಿಐನ ಇತರೆ ಸದಸ್ಯರಿಂದ ಅವರಿಗೆ ಸೂಕ್ತ ಬೆಂಬಲ ದೊರೆಯಲಿಲ್ಲ ಎನ್ನುವ ಬಗ್ಗೆಯೂ ವರದಿಗಳಾಗಿವೆ. ಇದೀಗ ಈ ವಿಚಾರದ ಕುರಿತಂತೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮೊದಲ ಬಾರಿಗೆ ತುಟಿಬಿಚ್ಚಿದ್ದು, ತಾವು ಬೇರೆಯ ವಿಚಾರಗಳತ್ತ ಗಮನಹರಿಸುವುದಾಗಿ ತಿಳಿಸಿದ್ದಾರೆ.

ಬಂಧನ್ ಬ್ಯಾಂಕ್‌ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸೌರವ್ ಗಂಗೂಲಿ, ಮಾಧ್ಯಮದವರ ಪ್ರಶ್ನೆಗೆ, ತಾವು ಸಾಕಷ್ಟು ವರ್ಷಗಳಿಂದ ಕ್ರಿಕೆಟ್‌ ಆಡಳಿತದಲ್ಲಿ ಭಾಗಿಯಾಗಿದ್ದು, ಈಗ ಬೇರೆ ವಿಚಾರಗಳ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ. ಭಾರತ ಪರ ಆಡಿದ್ದು ನನ್ನ ಪಾಲಿನ ಅತ್ಯುತ್ತಮ ದಿನಗಳು. ನಾನು ಬಿಸಿಸಿಐ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ಈಗ ನಾನು ಅದಕ್ಕಿಂತ ದೊಡ್ಡ ಕೆಲಸ ಮಾಡಬೇಕೆಂದಿದ್ದೇನೆ. ನೀವು ಎಂದೆಂದಿಗೂ ಆಟಗಾರನಾಗಿರಲು ಸಾಧ್ಯವಿಲ್ಲ, ಅದೇ ರೀತಿ ಶಾಶ್ವತವಾಗಿ ಆಡಳಿತಾಧಿಕಾರಿಯಾಗಿರಲು ಸಾಧ್ಯವಿಲ್ಲ. ಈ ಎರಡು ಕಾರ್ಯ ನಿರ್ವಹಿಸಿದ್ದು ಒಳ್ಳೆಯ ಅನುಭವ ಎಂದು ದಾದಾ ಹೇಳಿದ್ದಾರೆ.

ಇನ್ನು ಇದೇ ವೇಳೆ ಟೀಂ ಇಂಡಿಯಾ ನಾಯಕರಾಗಿದ್ದಾಗಿನ ತಮ್ಮ ಅನುಭವದ ಬಗ್ಗೆಯೂ ಸೌರವ್ ಗಂಗೂಲಿ ಮುಕ್ತವಾಗಿ ಮಾತನಾಡಿದ್ದಾರೆ. ಆರು ನಾಯಕರು ತಂಡವನ್ನು ಮುನ್ನಡೆಸಿದ್ದರು. ಏಕದಿನ ತಂಡದಿಂದ ರಾಹುಲ್ ದ್ರಾವಿಡ್ ಬಹುತೇಕ ಹೊರಬಿದ್ದರು ಎನ್ನುವ ಸಂದರ್ಭದಲ್ಲಿ ನಾನು ದ್ರಾವಿಡ್ ಬೆನ್ನಿಗೆ ನಿಂತಿದ್ದೆ. ನಾನು ಅವರ ಸಲಹೆಯನ್ನು ತೆಗೆದುಕೊಂಡು ತಂಡವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೆ. ಆದರೆ ತಂಡದ ವಾತಾವರಣದಲ್ಲಿ ಇದೆಲ್ಲ ಗೊತ್ತಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ನಾನು ರನ್‌ ಬಾರಿಸಿದ್ದನ್ನಷ್ಟೇ ಮುಖ್ಯವಲ್ಲ, ಜನರು ಅದಕ್ಕಿಂತ ಬೇರೆಯಾದುದ್ದನ್ನು ಜನರು ಗಮನಿಸಿದ್ದಾರೆ. ನಾಯಕನಾದವರು ಈ ರೀತಿ ತಂಡವನ್ನು ಮುನ್ನಡೆಸುತ್ತಾರೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

1983ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ, ಮಂಗಳವಾರವಷ್ಟೇ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬಹುತೇಕ ರೋಜರ್ ಬಿನ್ನಿ ಅವಿರೋಧವಾಗಿ ಬಿಸಿಸಿಐ ನೂತನ ಅಧ್ಯಕ್ಷರಾಗಿ ನೇಮಕವಾಗುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿವೆ.  ಇನ್ನು ಜಯ್ ಶಾ ಕೂಡಾ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಮ್ಮ ನಾಮಪತ್ರವನ್ನು ಸಲ್ಲಿಸಿದ್ದು, ಸತತ ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ನೇಮಕವಾಗುವುದು ಬಹುತೇಕ ಖಚಿತ ಎನಿಸಿದೆ. ಒಂದು ವೇಳೆ ಬೇರೆ ಯಾವ ಅಭ್ಯರ್ಥಿಯು ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಾಮಪತ್ರ ಸಲ್ಲಿಸದೇ ಹೋದರೆ, ಜಯ್ ಶಾ ಕೂಡಾ ಅವಿರೋಧವಾಗಿ ಬಿಸಿಸಿಐ ಕಾರ್ಯದರ್ಶಿಯಾಗಿ ಎರಡನೇ ಅವಧಿಗೆ ಆಯ್ಕೆಯಾಗುವ ಸಾಧ್ಯತೆಯಿದೆ.

andolana

Recent Posts

ಮೈಸೂರಿನಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಕಮಿಷನರ್‌ ಸೀಮಾ…

12 mins ago

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

46 mins ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

4 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

4 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

4 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

4 hours ago