ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಹಾಗೂ ಜನಪ್ರಿಯ ಗೇಮ್ ಕ್ಯಾಂಡಿ ಕ್ರಶ್ ಹೆಸರು ಸದ್ಯ ಟ್ರೆಂಡಿಂಗ್ನಲ್ಲಿದೆ. ಇದಕ್ಕೆ ಕಾರಣ ವೈರಲ್ ಆಗಿರುವ ವಿಡಿಯೋ ಎಂದರೆ ನೀವು ನಂಬಲೇಬೇಕು! ಈ ವಿಡಿಯೋವನ್ನು ಇಲ್ಲಿಯವರೆಗೆ ಒಂದು ಕೋಟಿಗೂ ಹೆಚ್ಚು ಜನರು ವೀಕ್ಷಿಸಿದ್ದಾರೆ.
ಇತ್ತೀಚೆಗೆ ಮಹೇಂದ್ರ ಸಿಂಗ್ ಧೋನಿ ಎಕಾನಮಿ ಕ್ಲಾಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಗಗನಸಖಿಯೊಬ್ಬರು ಬಂದು ಚಾಕೋಲೇಟ್ ನೀಡಿ ಸರ್ಪ್ರೈಸ್ ಕೊಟ್ಟರು. ಜತೆಗೆ ಸಂದೇಶವಿರುವ ಪತ್ರವೊಂದನ್ನು ನೀಡಿದರು. ಆದರೆ ಧೋನಿ ಚಾಕಲೇಟ್ ತೆಗೆದುಕೊಳ್ಳಲು ನಿರಾಕರಿಸಿ, ಖರ್ಜೂರದ ಪ್ಯಾಕೆಟ್ ಅನ್ನು ತೆಗೆದುಕೊಂಡರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನಿನ್ನೆಯಿಂದ ವೈರಲ್ ಆಗುತ್ತಿದೆ.
ಅಧಿಕೃತ ಖಾತೆ ವೈರಲ್ ಆಗಿರುವ ವೀಡಿಯೊ ಕುರಿತು ಏನನ್ನೂ ಟ್ವಿಟ್ ಮಾಡಿಲ್ಲ. ಅದಾಗ್ಯೂ ಕ್ಯಾಂಡಿ ಕ್ರಶ್ ಗೇಮ್ ಟ್ರೆಂಡಿಂಗ್ ಆಗಿರುವುದಂತು ಸತ್ಯ. ಧೋನಿ ಜನಪ್ರಿಯತೆ ಕಾರಣದಿಂದ ವಿಡಿಯೋ ವೈರಲ್ ಆದ ಆದ ಬೆನ್ನಲ್ಲೇ ಲಕ್ಷಾಂತರ ಮಂದಿ ಗೇಮ್ ಡೌನ್ಲೋಡ್ ಮಾಡಿದ್ದಾರೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…