ನವದೆಹಲಿ: 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗಿಯಾಗಿದ್ದ ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತೂಕದ ಏರಿಕೆ ಕಾರಣದಿಂದ ಫೈನಲ್ಸ್ ನಲ್ಲಿ ಭಾಗವಹಿಸದೇ ಟೂರ್ನಿಯಿಂದ ಹೊರಬಿದ್ದಿದ್ದರು. 100 ಗ್ರಾಂ ತೂಕ ಹೆಚ್ಚಾಗಿ ಅವರನ್ನು ಪಂದ್ಯದಿಂದ ಹೊರ ಹಾಕಲಾಗಿತ್ತು. ಈ ಕುರಿತಂತೆ ಫೋಗಟ್ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಮೊರೆ ಹೋಗಿದ್ದರು.
ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಬಳಿ ಫೈನಲ್ ಪಂದ್ಯವನ್ನು ತಡಮಾಡಲು ಸಾಧ್ಯವಿಲ್ಲ ಎಂದು ಸಿಎಎಸ್ ಹೇಳಿತ್ತು. ಈ ಸಂದರ್ಭದಲ್ಲಿ ಫೋಗಟ್ ಜಂಟಿ ಬೆಳ್ಳಿಗೆ ಬೇಡಿಕೆ ಇಟ್ಟಿದ್ದರು. ಆದರೆ ಇದೀಗಾ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಪದಕ ನೀಡುವ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು ವಿನೇಶ್ ಫೋಗಟ್ ಅವರ ಅನರ್ಹದ ಅರ್ಜಿಯ ಕುರಿತು ಪ್ಯಾರಿಸ್ ಒಲಿಂಪಿಕ್ಸ್ ಮುಗಿಯುವುದರ ಒಳಗಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿಕೆ ಬಿಡುಗಡೆಗೊಳಿಸಿದೆ.
ಇನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಲಯದಲ್ಲಿ ವಾದಿಸಲು ಭಾರತದ ಉನ್ನತ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದಷ್ಪತ್ ಸಂಘಾನಿಯಾ ಅವರನ್ನು ನೇಮಿಸಿದ್ದು, ವಿನೇಶ್ ಫೋಗಟ್ ಪರ ವಕಾಲತ್ತು ವಹಿಸಲಿದೆ. ಇನ್ನು ವಿನೇಶ್ ಫೋಗಟ್ ಅವರ ಪರವಾಗಿ ಭಾರತೀಯ ಒಲಿಂಪಿಕ್ ಅಸೋಶಿಯೇಷನ್ ನಿಂತಿದೆ ಎಂದು ಐಒಎ ಹೇಳಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…