ನವದೆಹಲಿ: ಕಪಿಲ್ ದೇವ್ ನಾಯಕತ್ವದಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದು ಇಂದಿಗೆ 40 ವರ್ಷಗಳು ಸಂದಿವೆ. ಈ ಸುವರ್ಣ ಸಂಭ್ರಮವನ್ನು ಬಿಸಿಸಿಐ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ಭಾರತೀಯ ಕ್ರಿಕೆಟ್ ಲೋಕದಲ್ಲಿ ಹೊಸ ಭಾಷ್ಯ ಬರೆದು ಇಂದಿಗೆ 40 ವರ್ಷಗಳು ತುಂಬಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.
ಜೂನ್ 25, 1983ರಲ್ಲಿ ಕ್ರಿಕೆಟ್ ಕಾಶಿ ಲಂಡನ್‍ನಲ್ಲಿ ನಡೆದಿದ್ದ ಫೈನಲ್ ಪಂದ್ಯದಲ್ಲಿ ಕಪಿಲ್ ದೇವ್ ಸಾರಥ್ಯದ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಿ 183 ರನ್ ಗಳಿಸಿತ್ತು. ನಂತರ ಬ್ಯಾಟಿಂಗ್ ನಡೆಸಿದ ವೆಸ್ಟ್‍ಇಂಡೀಸ್ 140 ರನ್‍ಗಳಿಗೆ ಅಲೌಟ್ ಆಗಿತ್ತು.
43 ರನ್ ಗಳಿಂದ ವಿಜಯ ಸಾಸಿದ ಟೀಮ್ ಇಂಡಿಯಾ ಮೊದಲ ಬಾರಿಗೆ ವಿಶ್ವಕಪ್ ಗೆದ್ದು ಸಂಭ್ರಮಿಸಿತ್ತು. ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ ಮೊಹಿಂದರ್ ಅಮರ್‍ನಾಥ್ 26 ರನ್ ಗಳಿಸಿ 12ಕ್ಕೆ 3 ವಿಕೆಟ್ ಪಡೆದು ಪಂದ್ಯಶ್ರೇಷ್ಠರಾದರು.