ಕ್ರೀಡೆ

Champions Trophy 2025: ವರುಣ್‌ ಚಕ್ರವರ್ತಿಗೆ ಐದು ವಿಕೆಟ್‌: ನ್ಯೂಜಿಲೆಂಡ್‌ ಮಣಿಸಿ ಅಜೇಯ ಓಟ ಮುಂದುವರಿಸಿದ ಭಾರತ

ದುಬೈ: ಭಾರತ ತಂಡದ ಆಲ್‌ರೌಂಡರ್‌ ಪ್ರದರ್ಶನದ ಸಹಾಯದಿಂದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಕೊನೆಯ ಲೀಗ್‌ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲೆಂಡ್‌ ಪಡೆಯನ್ನು ಬಗ್ಗು ಬಡಿದ ಭಾರತ ತಂಡದ ಈ ಟೂರ್ನಿಯಲ್ಲಿ ತನ್ನ ಅಜೇಯ ಓಟ ಮುಂದುವರಿಸಿದೆ. ಲೀಗ್‌ನಲ್ಲಿ ತಾನಾಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದು ಬೀಗಿದೆ.

ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್‌ ನಡುವಣ ಪಂದ್ಯದಲ್ಲಿ ಕಿವೀಸ್‌ ಪಡೆಯನ್ನು 44 ರನ್‌ಗಳ ಅಂತರದಿಂದ ಸೋಲಿಸಿದ ಭಾರತ ತಂಡ ಎ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 249 ರನ್‌ ಕಲೆಹಾಕಿ, ಕಿವೀಸ್‌ಗೆ 250 ರನ್‌ಗಳ ಟಾರ್ಗೆಟ್‌ ನೀಡಿತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್‌ 45.3 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 205 ರನ್‌ ಗಳಿಸಿತು.

ಟೀಂ ಇಂಡಿಯಾ ಇನ್ನಿಂಗ್ಸ್‌: ಕಿವೀಸ್‌ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಆರಂಭಿಕ ಆಟಗಾರರಿಬ್ಬರು ಬಂದಷ್ಟೆ ವೇಗವಾಗಿ ಪೆವಿಲಿಯನ್‌ ಸೇರಿದರು. ಗಿಲ್‌ 2 ರನ್‌ ಗಳಿಸಿದರೇ, ನಾಯಕ ರೋಹಿತ್‌ ಶರ್ಮಾ 15 ರನ್‌ ಗಳಿಸಿದರು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ಕೊಹ್ಲಿ ಈ ಪಂದ್ಯದಲ್ಲಿ ರನ್‌ ಗಳಿಸುವಲ್ಲಿ ಪರದಾಡಿದರು. ಕೊಹ್ಲಿ ಕೇವಲ 11 ರನ್‌ ಗಳಿಗೆ ಸುಸ್ತಾದರು.

ಬಳಿಕ ಜೊತೆಯಾದ ಶ್ರೇಯಸ್‌ ಅಯ್ಯರ್‌ ಮತ್ತು ಅಕ್ಷರ್‌ ಪಟೇಲ್‌ ನಿಧಾನಗತಿಯಲ್ಲಿ ಇನ್ನಿಂಗ್ಸ್‌ ಕಟ್ಟಿದರು. ಶ್ರೇಯಸ್‌ 79, ಅಕ್ಷರ್‌ 42 ರನ್‌ ಬಾರಿಸಿ ಔಟಾದರು. ಕೊನೆಯಲ್ಲಿ ಅಬ್ಬರಿಸಿದ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ 45 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು. ಉಳಿದಂತೆ ಕೆ.ಎಲ್‌ ರಾಹುಲ್‌ 23, ಜಡೇಜಾ 16, ಶಮಿ ಔಟಾಗದೇ 5, ಕುಲ್ದೀಪ್‌ ಯಾದವ್‌ ಔಟಾಗದೇ 1 ರನ್‌ ಗಳಿಸಿದರು.

ನ್ಯೂಜಿಲೆಂಡ್ ಪರ ಮ್ಯಾಟ್‌ ಹೆನ್ರಿ ಐದು ವಿಕೆಟ್‌ ಗೊಂಚಲು ಪಡೆದರು. ಜಾಮಿಸನ್‌, ವಿಲಿಯಂ, ಸ್ಯಾಂಟ್ನರ್‌ ಹಾಗೂ ರಚಿನ್‌ ರವೀಂದ್ರ ತಲಾ ಒಂದು ವಿಕೆಟ್‌ ಪಡೆದರು.

ನ್ಯೂಜಿಲೆಂಡ್‌ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಕಿವೀಸ್‌ ಪಡೆಗೆ ಉತ್ತಮ ಜೊತೆಯಾಟ ಸಿಗಲೇ ಇಲ್ಲ. ಆರಂಭಿಕರಾಗಿ ಕಣಕ್ಕಿಳಿದ ವಿಲ್‌ ಯಂಗ್‌ 22, ರಚಿನ್‌ ರವೀಂದ್ರ 6 ರನ್‌ ಗಳಿಸಿ ಔಟಾದರು. ಮಾಜಿ ನಾಯಕ ಕೇನ್‌ ವಿಲಿಯಮ್ಸನ್‌ 81 ರನ್‌ ಕಲೆಹಾಕಿದ್ದೇ ತಂಡದ ಪರವಾಗಿ ಗಳಿಸಿದ ವೈಯಕ್ತಿಕ ಗರಿಷ್ಠ ಮೊತ್ತ. ಉಳಿದಂತೆ ಬೇರಾರಿಂದಲೂ ಇನ್ನಿಂಗ್ಸ್‌ ಕಟ್ಟಿ ಗೆಲ್ಲುವ ಆಟ ಕಂಡು ಬರಲೇ ಇಲ್ಲ.

ಮಿಚೆಲ್‌ 17, ಲಾಥಮ್‌ 14, ಪಿಲಿಪ್‌ 12, ಬ್ರಾಸ್‌ವೆಲ್‌ 2, ನಾಯಕ ಸ್ಯಾಂಟ್ನರ್‌ 28, ಮ್ಯಾಟ್‌ ಹೆನ್ರಿ 2, ವಿಲಿಯಂ 1 ಹಾಗೂ ಜೇಮಿಸನ್‌ ಔಟಾಗದೆ 9 ರನ್‌ ಗಳಿಸಿದರು.

ಭಾರತ ತಂಡದ ಪರವಾಗಿ ವರುಣ್‌ ಚಕ್ರವರ್ತಿ ಐದು ವಿಕೆಟ್‌, ಕುಲ್ದೀಪ್‌ ಯಾದವ್‌ ಎರಡು, ಜಡೇಜಾ, ಅಕ್ಷರ್‌ ಮತ್ತು ಹಾರ್ದಿಕ್‌ ಪಾಂಡ್ಯ ತಲಾ ಒಂದೊಂದು ವಿಕೆಟ್‌ ಕಬಳಿಸಿ ಮಿಂಚಿದರು.

ಪಂದ್ಯಶ್ರೇಷ್ಠ: ವರುಣ್‌ ಚಕ್ರವರ್ತಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

7 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

7 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

8 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

9 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

9 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

9 hours ago