ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ-2025 ಕ್ರಿಕೆಟ್ ಟೂರ್ನಿಯಲ್ಲಿಂದು ಭಾರತ ತಂಡ ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದ್ದು, ಶುಭಾರಂಭದ ನಿರೀಕ್ಷೆಯಲ್ಲಿದೆ.
ತವರಿನಲ್ಲಿ ಇಂಗ್ಲೆಂಡ್ ವಿರುದ್ದ ಸರಣಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀ ಇಂಡಿಯಾ ಇಂದಿನ ಪಂದ್ಯದಲ್ಲಿ ಹೇಗೆ ಆಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಈಗಾಗಲೇ ಎರಡು ಬಾರಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿರುವ ಭಾರತ ತಂಡ, ಮೂರನೇ ಬಾರಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ದುಬೈಗೆ ಬಂದಿಳಿದಿದೆ.
ಇತ್ತ ಬಾಂಗ್ಲಾದೇಶ ತಂಡವನ್ನು ಕೂಡ ಕಡೆಗಣಿಸುವಂತಿಲ್ಲ. ಐಸಿಸಿ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ ಉತ್ತಮ ಸಾಧನೆ ಇಲ್ಲದಿದ್ದರೂ, ಹಿರಿಯ ಮತ್ತು ಕಿರಿಯ ಪಡೆಯೊಂದಿಗೆ ಟೂರ್ನಿ ಶುಭಾರಂಭಕ್ಕೆ ಬಾಂಗ್ಲಾ ತಂಡ ಕೂಡ ಎದುರು ನೋಡುತ್ತಿದೆ.
ಇದುವರೆಗೂ ಭಾರತ ಮತ್ತು ಬಾಂಗ್ಲಾ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲ 41 ಬಾರಿ ಎದುರಾಗಿದ್ದು, 32 ಪಂದ್ಯಗಳಲ್ಲಿ ಭಾರತ, 8ರಲ್ಲಿ ಬಾಂಗ್ಲಾ ಗೆಲುವ ಸಾಧಿಸಿದ್ದರೆ, 1 ಪಂದ್ಯ ಫಲಿತಾಂಸವಿಲ್ಲದೇ ರದ್ದಾಗಿದೆ.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.
ಬಾಂಗ್ಲಾದೇಶ: ನಜ್ಮುಲ್ ಹುಸೇನ್ ಶಾಂತೊ(ನಾಯಕ), ಸೌಮ್ಯ ಸರ್ಕಾರ್, ತಂಜೀದ್ ಹಸನ್, ಮುಷ್ಫಿಕರ್ ರಹೀಮ್, ಮಹಮ್ಮದುಲ್ಲಾ, ಮೆಹದಿ ಹಸನ್, ಜಕೀರ್ ಅಲಿ, ತಸ್ಕಿನ್ ಅಹಮದ್, ತಂಜಿಮ್ ಹಸನ್ ಶಕೀಬ್, ನಹೀದ್ ರಾಣಾ, ಮುಸ್ತಫಿಜುರ್ ರೆಹಮಾನ್, ತವಾಹಿದ್ ಹೃದಯ್, ರಿಹಾದ್ ಹುಸೇನ್, ಪರ್ವೇಜ್ ಹೊಸಾಯ್.
ಪಂದ್ಯ ಆರಂಭ: ಮಧ್ಯಾಹ್ನ 2.30PM
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್, ಜಿಯೊಹಾಟ್ ಸ್ಟಾರ್ ಆಪ್
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…