ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ 2025: ಶುಭಾರಂಭದ ನಿರೀಕ್ಷೆಯಲ್ಲಿ ಭಾರತ

ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ-2025 ಕ್ರಿಕೆಟ್‌ ಟೂರ್ನಿಯಲ್ಲಿಂದು ಭಾರತ ತಂಡ ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದ್ದು, ಶುಭಾರಂಭದ ನಿರೀಕ್ಷೆಯಲ್ಲಿದೆ.

ತವರಿನಲ್ಲಿ ಇಂಗ್ಲೆಂಡ್‌ ವಿರುದ್ದ ಸರಣಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀ ಇಂಡಿಯಾ ಇಂದಿನ ಪಂದ್ಯದಲ್ಲಿ ಹೇಗೆ ಆಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಈಗಾಗಲೇ ಎರಡು ಬಾರಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಗೆದ್ದಿರುವ ಭಾರತ ತಂಡ, ಮೂರನೇ ಬಾರಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಗೆಲ್ಲಲು ರೋಹಿತ್‌ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ದುಬೈಗೆ ಬಂದಿಳಿದಿದೆ.

ಇತ್ತ ಬಾಂಗ್ಲಾದೇಶ ತಂಡವನ್ನು ಕೂಡ ಕಡೆಗಣಿಸುವಂತಿಲ್ಲ. ಐಸಿಸಿ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ ಉತ್ತಮ ಸಾಧನೆ ಇಲ್ಲದಿದ್ದರೂ, ಹಿರಿಯ ಮತ್ತು ಕಿರಿಯ ಪಡೆಯೊಂದಿಗೆ ಟೂರ್ನಿ ಶುಭಾರಂಭಕ್ಕೆ ಬಾಂಗ್ಲಾ ತಂಡ ಕೂಡ ಎದುರು ನೋಡುತ್ತಿದೆ.

ಇದುವರೆಗೂ ಭಾರತ ಮತ್ತು ಬಾಂಗ್ಲಾ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲ 41 ಬಾರಿ ಎದುರಾಗಿದ್ದು, 32 ಪಂದ್ಯಗಳಲ್ಲಿ ಭಾರತ, 8ರಲ್ಲಿ ಬಾಂಗ್ಲಾ ಗೆಲುವ ಸಾಧಿಸಿದ್ದರೆ, 1 ಪಂದ್ಯ ಫಲಿತಾಂಸವಿಲ್ಲದೇ ರದ್ದಾಗಿದೆ.

ಭಾರತ: ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಕೆಎಲ್‌ ರಾಹುಲ್‌, ರಿಷಭ್‌ ಪಂತ್‌, ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ವಾಷಿಂಗ್ಟನ್‌ ಸುಂದರ್‌, ಕುಲದೀಪ್‌ ಯಾದವ್‌, ಹರ್ಷಿತ್‌ ರಾಣಾ, ಮೊಹಮ್ಮದ್‌ ಶಮಿ, ಅರ್ಷದೀಪ್‌ ಸಿಂಗ್‌, ರವೀಂದ್ರ ಜಡೇಜಾ, ವರುಣ್‌ ಚಕ್ರವರ್ತಿ.

ಬಾಂಗ್ಲಾದೇಶ: ನಜ್ಮುಲ್‌ ಹುಸೇನ್‌ ಶಾಂತೊ(ನಾಯಕ), ಸೌಮ್ಯ ಸರ್ಕಾರ್‌, ತಂಜೀದ್‌ ಹಸನ್‌, ಮುಷ್ಫಿಕರ್‌ ರಹೀಮ್‌, ಮಹಮ್ಮದುಲ್ಲಾ, ಮೆಹದಿ ಹಸನ್‌, ಜಕೀರ್‌ ಅಲಿ, ತಸ್ಕಿನ್‌ ಅಹಮದ್‌, ತಂಜಿಮ್‌ ಹಸನ್‌ ಶಕೀಬ್‌, ನಹೀದ್‌ ರಾಣಾ, ಮುಸ್ತಫಿಜುರ್‌ ರೆಹಮಾನ್‌, ತವಾಹಿದ್ ಹೃದಯ್‌, ರಿಹಾದ್‌ ಹುಸೇನ್‌, ಪರ್ವೇಜ್‌ ಹೊಸಾಯ್‌.

ಪಂದ್ಯ ಆರಂಭ: ಮಧ್ಯಾಹ್ನ 2.30PM
ನೇರಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌, ಜಿಯೊಹಾಟ್‌ ಸ್ಟಾರ್‌ ಆಪ್‌

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago