ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ: ಆಸೀಸ್‌ ಬ್ಯಾಟರ್‌ ಶಾರ್ಟ್‌ ಸೆಮಿಸ್‌ಗೆ ಡೌಟ್‌

ಲಾಹೋರ್‌: ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಮ್ಯಾಥ್ಯೂ ಶಾರ್ಟ್‌ ಅಫ್ಗಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದು, ಸೆಮಿಫೈನಲ್‌ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ.

ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಅಫ್ಗಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಮ್ಯಾಥ್ಯೂ ಶಾರ್ಟ್‌ 20 ರನ್‌ಗಳಿಸಿ ಔಟಾದರು. ಈ ವೇಳೆ ಅವರು ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡುಬಂದಿತು.

ಈ ಬಗ್ಗೆ ಆಸ್ಟ್ರೇಲಿಯಾದ ನಾಯಕ ಸ್ಟೀವ್‌ ಸ್ಮಿತ್‌ ಮಾತನಾಡಿ, ಸ್ಟಾರ್‌ ಓಪನರ್‌ ಮ್ಯಾಥ್ಯೂ ಶಾರ್ಟ್‌ ಮುಂದಿನ ವಾರದ ಸೆಮಿಫೈನಲ್‌ ಪಂದ್ಯದಲ್ಲಿ ಆಡಲು ಅನುಮಾನ ಎಂದು ತಿಳಿಸಿದ್ದಾರೆ.

ಒಂದು ವೇಳೆ ಮ್ಯಾಥ್ಯೂ ಶಾರ್ಟ್‌ ಈ ಟೂರ್ನಿಯಿಂದ ಹೊರಗುಳಿದರೆ ಆ ಸ್ಥಾನಕ್ಕೆ ಆಲ್‌ರೌಂಡರ್‌ ಆರನ್‌ ಹಾರ್ಡಿ ಅವರು ಆಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯಾ ಮಂಗಳವಾರ ನಡೆಯುವ ಸೆಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ಅಥವಾ ಭಾರತದ ವಿರುದ್ಧ ಹೋರಾಟ ನಡೆಸಲಿದೆ.

ಆಸ್ಟ್ರೇಲಿಯಾ ಪ್ರಸ್ತುತ 4 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಒಂದು ವೇಳೆ ಶನಿವಾರ ನಡೆಯುವ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ ನಡುವಿನ ಪಂದ್ಯದಲ್ಲಿ ದಕ್ಷಿಣ ಆಪ್ರಿಕಾ ಗೆದ್ದರೆ ಅಂಕಪಟ್ಟಿಯಲ್ಲಿ ಬದಲಾವಣೆ ಆಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago