ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಪಾಕಸ್ತಾನ್ ತಂಡದ ವಿರುದ್ಧ ಜಯ ಸಾಧಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ಆಲೌಟ್ ಆಯಿತು. ಈ ಮೊತ್ತ ಬೆನ್ನತ್ತಿದ ಭಾರತ 42.3 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ವಿಜಯದ ಕೇಕೆ ಹಾಕಿತು. ಇದರಿಂದ ಕ್ರೀಡಾಂಗಣದಲ್ಲಿ ನೆರದಿದ್ದ ಲಕ್ಷಾಂತರ ಭಾರತದ ಪರ ಕ್ರಿಕೆಟ್ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು.
ರನ್ ಮೆಷಿನ್ ವಿರಾಟ್ ಕೊಹ್ಲಿ ಅವರ ಶತಕದಾಟ, ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ ಪಾಕಿಸ್ತಾನ ಮಣಿಸಿದ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಸೆಮಿಸ್‌ಗೆ ಅರ್ಹತೆ ಪಡೆದುಕೊಂಡಿದೆ.
ಪಾಕ್ ಇನ್ನಿಂಗ್ಸ್: ಮೊದಲು ಬ್ಯಾಟ್ ಮಾಡಲು ಬಂದ ಪಾಕಿಸ್ತಾನ ಪರವಾಗಿ ಬಾಬರ್ ಅಜಂ ಹಾಗೂ ಇಮಾಮ್ ಉಲ್-ಹಕ್ ಇನ್ನಿಂಗ್ಸ್ ಆರಂಭಿಸಿದರು. ಆದರೆ ಭಾರತ ತಂಡದ ಬೌಲರ್‌ಗಳ ದಾಳಿಗೆ ತತ್ತರಿಸಿದರು. ಬಾಬರ್ ಅಜಂ 23 ರನ್ ಗಳಿಸಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿ ಹೊರನಡೆದರು. ಇಮಾಮ್ 10 ರನ್ ಗಳಿಸಿದ್ದ ವೇಳೆ ಇಲ್ಲದ ರನ್ ಕದಿಯಲು ಹೋಗಿ ಅಕ್ಷರ್ ಪಟೇಲ್ ಗುಡ್ ಥ್ರೋಗೆ ವಿಕೆಟ್ ಕಳೆದುಕೊಂಡರು.
ನಂತರ ಜೊತೆಯಾದ ಸೌದ್ ಶಾಕಿಲ್ ಹಾಗೂ ನಾಯಕ ಮೊಹಮ್ಮದ್ ರಿಜ್ವಾನ್ ಚೇತರಿಕೆಯ ಆಟವಾಡಿದರು. ಶಾಕಿಲ್ 76 ಎಸೆತಗಳಲ್ಲಿ 62 ರನ್ ಬಾರಿಸಿದರೇ, ಇತ್ತ ರಿಜ್ವಾನ್ 77 ಎಸೆತಗಳಲ್ಲಿ 46 ರನ್ ಬಾರಿಸಿದರು.
ಉಳಿದಂತೆ ಆಘಾ 19, ತಾಹೀರ್ 4, ಶಾಹೀನ್ ಶಾ ಅಫ್ರಿದಿ ಶೂನ್ಯ, ನಸೀಮ್ ಶಾ 14 ರನ್, ಹ್ಯಾರಿಸ್ ರೌಫ್ 8, ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ಕುಶ್ದಿಲ್ ಶಾ 38 ರನ್ ಗಳಿಸಿದರು. ಅಬ್ರಾರ್ ಯಾವುದೇ ಖಾತೆ ತೆರೆಯದೇ ನಾಟ್‌ಔಟ್ ಆಗಿ ಉಳಿದರು.
ಟೀಂ ಇಂಡಿಯಾ ಪರವಾಗಿ ಕುಲ್ದೀಪ್ ಯಾದವ್ ಮೂರು, ಹಾರ್ದಿಕ್ ಪಾಂಡ್ಯ ಎರಡು ವಿಕೆಟ್, ಅಕ್ಷರ್ ಪಟೇಲ್, ಜಡೆಜಾ ಹಾಗೂ ಹರ್ಷಿತ್ ರಾಣಾ ತಲಾ ಒಂದೊಂದು ವಿಕೆಟ್ ಕಬಳಿಸಿ ಮಿಂಚಿದರು.
ಟೀಂ ಇಂಡಿಯಾ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಭಾರತ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ನಾಯಕ ರೋಹಿತ್ ಶರ್ಮಾ 20 ರನ್‌ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಶುಭ್‌ಮನ್ ಗಿಲ್ 46 ರನ್ ಗಳಿಸಿ ಅಬ್ರಾರ್‌ಗೆ ವಿಕೆಟ್ ಒಪ್ಪಿಸಿ ಹೊರನಡೆದರು.
ನಂತರ ಒಂದಾದ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಪಾಕ್ ಬೌಲರ್‌ಗಳನ್ನು ಕಾಡಿದರು. ಶ್ರೇಯಸ್ ಅಯ್ಯರ್ 67 ಎಸೆತಗಳಲ್ಲಿ 56 ರನ್ ಗಳಿಸಿ ಔಟಾದರು. ಬಳಿಕ ಬಂದ ಹಾರ್ದಿಕ್ ಪಾಂಡ್ಯ 8 ರನ್ ಗಳಿಸಿ ಬಂದಷ್ಟೆ ವೇಗವಾಗಿ ಹಿಂತಿರುಹಿದರು.
ಕೊನೆಯಲ್ಲಿ ಅಕ್ಷರ್ ವಿರಾಟ್ ಕೊಹ್ಲಿಗೆ ಸಾಥ್ ನೀಡಿದರು. ಅಕ್ಷರ್ ಔಟಾಗದೇ 3 ರನ್ ಗಳಿಸಿದರೇ, ಕಿಂಗ್ ಕೊಹ್ಲಿ ಔಟಾಗದೇ 111 ಎಸೆತಗಳಲ್ಲಿ 7 ಬೌಂಡರಿ ಸಹಿತ 100 ರನ್ ಗಳಿಸಿ ತಂಡಕ್ಕೆ ಗೆಲುವು ತಂದಿಟ್ಟರು.
ಪಾಕ್ ಪರವಾಗಿ ಶಾಹೀನ್ ಅಫ್ರಿದಿ ಎರಡು, ಕಶ್ದಿಲ್ ಹಾಗೂ ಅಬ್ರಾರ್ ತಲಾ ಒಂದೊಂದು ವಿಕೆಟ್ ಪಡೆದರು.
ಪಂದ್ಯಶ್ರೇಷ್ಠ: ವಿರಾಟ್ ಕೊಹ್ಲಿ
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…