Mysore
28
few clouds

Social Media

ಶನಿವಾರ, 15 ಮಾರ್ಚ್ 2025
Light
Dark

ಚಾಂಪಿಯನ್ಸ್‌ ಟ್ರೋಫಿ ಫೈನಲ್‌: ಟಾಸ್‌ ಗೆದ್ದ ನ್ಯೂಜಿಲೆಂಡ್‌ ಬ್ಯಾಟಿಂಗ್‌ ಆಯ್ಕೆ

ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ನ್ಯೂಜಿಲೆಂಡ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, 12 ವರ್ಷಗಳ ನಂತರ ಚಾಂಪಿಯನ್ಸ್‌ ಟ್ರೋಫಿ ಮುಡಿಗೇರಿಸಿಕೊಳ್ಳಲು ಟೀ ಇಂಡಿಯಾ ಕಾತುರದಿಂದ ಕಾಯುತ್ತಿದ್ದರೆ, ಇತ್ತ ನ್ಯೂಜಿಲೆಂಡ್‌ ತಂಡ ಕೂಡ 25 ವರ್ಷಗಳ ನಂತರ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಚಿತ್ತ ನೆಟ್ಟಿದೆ.

ತಂಡಗಳು ಇಂತಿವೆ:

ಭಾರತ: ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆಎಲ್‌ ರಾಹುಲ್‌ (ವಿಕೆಟ್‌ ಕೀಪರ್‌), ಅಕ್ಸರ್‌ ಪಟೇಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್‌ ಶಮಿ, ಕುಲ್‌ದೀಪ್‌ ಯಾದವ್‌, ವರುಣ್‌ ಚಕ್ರವರ್ತಿ

ನ್ಯೂಜಿಲೆಂಡ್‌: ಮಿಚೆಲ್‌ ಸ್ಯಾಂಟ್ನರ್‌ (ನಾಯಕ), ವಿಲ್‌ ಯಂಗ್‌, ರಚಿನ್‌ ರವೀಂದ್ರ, ಕೇನ್‌ ವಿಲಿಯಮ್ಸನ್‌, ಟಾಮ್‌ ಲಾಥಮ್‌, ಡೆರಿಲ್‌ ಮಿಚೆಲ್‌, ಗ್ಲೆನ್‌ ಫಿಲಿಪ್ಸ್‌, ಮಿಚೆಲ್‌ ಬ್ರಾಸ್‌ವೆಲ್‌, ನಾಥನ್‌ ಸ್ಮಿತ್‌, ಕೈಲ್‌ ಜಾಮೀಸನ್‌, ವಿಲಿಯಂ ಓರೋರ್ಕಿ.

ಸ್ಥಳ: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣ, ದುಬೈ

ನೇರಪ್ರಸಾರ: ಜಿಯೊ ಹಾಟ್‌ಸ್ಟಾರ್‌, ಹಾಟ್‌ ಸ್ಟಾರ್‌

Tags: