ಕ್ರೀಡೆ

Champions Trophy ಮುಖಾಮುಖಿ: ಭಾರತvsಪಾಕಿಸ್ತಾನ್‌ ಯಾರದ್ದು ಮೇಲುಗೈ ಗೊತ್ತಾ?

ದುಬೈ: ಬಹುನಿರೀಕ್ಷಿತ ಬದ್ದ ವೈರಿಗಳ ಮುಖಾಮುಖಿಗೆ ವೇದಿಕೆ ಸಿದ್ದವಾಗಿ. ಪಾಕಿಸ್ತಾನ ಆಯೋಜಕತ್ವದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಕ್ರಿಕೆಟ್‌ ಅಭಿಮಾನಿಗಳಿಗೆ ರಸದೌತಣ ಸಿಗಲಿದೆ.

ಅಂದಹಾಗೆ ಇಂದು ಮದ್ಯಾಹ್ನ 2.30 ಗಂಟೆಗೆ ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕ್‌ ಕಾದಾಟ ನಡೆಸಲಿದೆ. ಇನ್ನು ಈ ಐತಿಹಾಸಿಕ ಕಾದಾಟಕ್ಕೆ ಕ್ರೀಡಾಲೋಕವೇ ಕಾದುಕೂತಿರುವುದು ಅಚ್ಚರಿ ಸಂಗತಿ.

ಇನ್ನು ಚಾಂಪಿಯನ್ಸ್‌ ಟ್ರೋಫಿಯಲ್ಲಿ ಈ ಇಬ್ಬರ ಈವರೆಗಿನ ಮುಖಾಮುಖಿ ಗಮನಿಸುವುದಾದರೇ, ಇತ್ತಂಡಗಳು ಈವರೆಗೆ ಐದು ಬಾರಿ ಮುಖಾಮುಖಿಯಾಗಿದ್ದು, ಅದರಲ್ಲಿ ಬರೋಬ್ಬರಿ ಮೂರು ಬಾರಿ ಗೆಲುವು ದಾಖಲಿಸಿರುವ ಪಾಕಿಸ್ತಾನ್‌ ಮುನ್ನಡೆ ಕಾಯ್ದುಕೊಂಡಿದೆ.

ಟೀಂ ಇಂಡಿಯಾ 2013, 2017ರಲ್ಲಿ ಬಿಟ್ಟರೇ ಇನ್ನೆಲ್ಲಿಯೂ ಗೆಲುವು ದಾಖಲಿಸಿಲ್ಲ. ಉಳಿದಂತೆ ಮೂರು ಬಾರಿ ಪಾಕಿಸ್ತಾನ ಗೆಲುವು ದಾಖಲಿಸಿದೆ. 2017ರ ಚಾಂಪಿಯನ್ಸ್‌ ಟ್ರೋಫಿ ಫೈನಲ್ಸ್‌ನಲ್ಲಿ ಭಾರತ ಮಣಿಸಿ ಟ್ರೋಫಿಗೆ ಮುತ್ತಿಟ್ಟಿದೆ.

ಮುಖಾಮುಖಿ ವಿವರ:
2004 ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ 200 ರನ್‌ ಗಳಿಗೆ ಆಲ್‌ಔಟ್‌ ಆದರೇ, ಇದನ್ನು ಚೇಸ್‌ ಮಾಡಿದ ಪಾಕ್‌ 3 ಅಂತರದ ಗೆಲುವು ದಾಖಲಿಸಿತ್ತು.

2009ರಲ್ಲಿ ಸೆಂಚೂರಿಯನ್‌ ನಲ್ಲಿ ಭಾರತ ಹಾಗೂ ಪಾಕ್‌ ಎರಡನೇ ಬಾರಿಗೆ ಮುಖಾಮುಖಿಯಾಗಿತ್ತು. ಮೊದಲು ಬ್ಯಾಟ್‌ ಮಾಡಿದ್ದ ಪಾಕ್‌ 303 ರನ್‌ ಬಾರಿಸಿದರೇ, ಈ ಮೊತ್ತ ಬೆನ್ನತ್ತಿದ್ದ ಭಾರತ ಕೇವಲ 248 ರನ್‌ ಗಳಿಗೆ ಆಲ್‌ಔಟ್‌ ಆಗಿ 54 ರನ್‌ಗಳ ಅಂತರದಿಂದ ಸೋಲು ಕಂಡಿತ್ತು.

2013ರಲ್ಲಿ ಬರ್ಮಿಂಗ್‌ ಹ್ಯಾಮ್‌ನಲ್ಲಿ ಮೂರನೇ ಬಾರಿಗೆ ಇತ್ತಂಡಗಳು ಮುಖಾಮುಖಿಯಾಗಿದ್ದವು. ಟೀಂ ಇಂಡಿಯಾ ಪ್ರದರ್ಶನಕ್ಕೆ ಮಂಕಾದ ಪಾಕ್‌ 165 ರನ್‌ಗೆ ಸರ್ವಪತನ ಕಂಡಿತು. ಅದ್ಯಾಗೂ ಮಳೆಯಿಂದಾಗಿ ಡಕ್ವರ್ಥ್‌ ಲೂಯಿಸ್‌ ನಿಯಮದಡಿ ಭಾರತಕ್ಕೆ 8 ವಿಕೆಟ್‌ಗಳ ಗೆಲುವು ಸಿಕ್ಕಿತು. ಈ ಟೂರ್ನಿಯಲ್ಲಿ ಧೋನಿ ನಾಯಕತ್ವದಲ್ಲಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿದಿತ್ತು.

2017 ರಲ್ಲಿ ಬರ್ಮಿಂಗ್‌ ಹ್ಯಾಮ್‌ನಲ್ಲಿ ಬಿ ಗುಂಪಿನಲ್ಲಿ ಇತ್ತಂಡಗಳು ಎದುರಾಗಿದ್ದವು. ಮೊದಲು ಬ್ಯಾಟ್‌ ಮಾಡಿದ ಭಾರತ 319 ರನ್‌ ಬಾರಿಸಿದರೇ, ಈ ಮೊತ್ತ ಬೆನ್ನತ್ತಿದ ಪಾಕ್‌ ಕೇವಲ 164 ರನ್‌ ಗಳಿಸಿ 124 ರನ್‌ಗಳ ಅಂತರದ ಹೀನಾಯ ಸೋಲು ಕಂಡಿತು.

2017ರಲ್ಲಿ ಫೈನಲ್ಸ್‌ನಲ್ಲಿ ಇತ್ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಿದ್ದವು. ಆರಂಭದಿಂದಲೇ ಬಿರುಸಿನ ಆಟವಾಡಿದ ಪಾಕ್‌ ಬರೋಬ್ಬರಿ 338 ರನ್‌ ಕಲೆಹಾಕಿತು. ಈ ಮೊತ್ತ ಬೆನ್ನತ್ತಿದ ಭಾರತ 158 ರನ್‌ಗಳಿಗೆ ಸರ್ವಪತನ ಕಂಡು 180 ರನ್‌ಗಳ ಭಾರೀ ಅಂತರದಿಂದ ಸೋಲು ಕಾಣುವ ಮೂಲಕ ಟ್ರೋಫಿ ಕೈಚೆಲ್ಲಿತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

11 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

11 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

11 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

12 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

12 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

12 hours ago