ದುಬೈ: ಬಾಂಗ್ಲಾದೇಶದ ವಿರುದ್ಧ ಮೊದಲ ಪಂದ್ಯ ಆಡುವ ಮೂಲಕ ಭಾರತ ತಂಡವು ಐಸಿಸಿ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.
ತವರಿನಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿ ಗೆಲುವಿನಿಂದ ಆತ್ಮವಿಶ್ವಾಸದಲ್ಲಿರುವ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಇದೇ ತಿಂಗಳ 20ರಂದು ದುಬೈನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ.
ಎರಡನೇಯ ಪಂದ್ಯವು ಫೆ.23ರಂದು ಪಾಕಿಸ್ತಾನ ತಂಡದ ವಿರುದ್ಧ ನಡೆಯಲಿದ್ದು, ಮಾ.2 ರಂದು ನ್ಯೂಜಿಲೆಂಡ್ ತಂಡದ ವಿರುದ್ಧ ಆಡಲಿದೆ.
ಭಾರತ ತಂಡವು ಎರಡು ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. 2002ರಲ್ಲಿ ಶ್ರೀಲಂಕಾದ ಜೊತೆ ಜಂಟಿಯಾಗಿ ಜಯಗಳಿಸಿದ್ದರೆ 2013ರಲ್ಲಿ ಇಂಗ್ಲೆಂಡ್ ತಂಡ ಸೋಲಿಸಿ ಟ್ರೋಫಿ ತನ್ನದಾಗಿಸಿಕೊಂಡಿತ್ತು.
ಭಾರತ ತಂಡ ಹಿಂತಿದೆ: ರೋಹಿತ್ ಶರ್ಮಾ (ನಾಯಕ), ಶ್ರೇಯಸ್ ಐಯ್ಯರ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಕ್ಸರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕೆಎಲ್ ರಾಹುಲ್, ರಿಷಭ್ ಪಂತ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಕುಲ್‌ದೀಪ್ ಯಾದವ್, ಮಹಮ್ಮದ್ ಶಮಿ, ವರುಣ್ ಚಕ್ರವರ್ತಿ.





