ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಲಯಕ್ಕೆ ಮರಳುವುದು ಅತ್ಯಂತ ನಿರ್ಣಾಯಕವಾಗಲಿದೆ ಎಂದು ಮಾಜಿ ಆಟಗಾರ ಸುರೇಶ್ ರೈನಾ ಅಭಿಪ್ರಾಯಪಟ್ಟಿದ್ದಾರೆ.
ಇತ್ತೀಚೆನ ಸರಣಿಗಳಲ್ಲಿ ರೋಹಿತ್ ಹಾಗೂ ವಿರಾಟ್ ಕೊಹ್ಲಿ ವೈಫಲ್ಯವನ್ನು ಅನುಭವಿಸಿದ್ದರು.
ಹಿಂದಿನ ಐಸಿಸಿ ಟೂರ್ನಿಗಳಲ್ಲಿ ರೋಹಿತ್ ಹಾಗೂ ಕೊಹ್ಲಿ ಪ್ರದರ್ಶನ ಉತ್ತಮವಾಗಿದೆ. ಒಬ್ಬರನ್ನೊಬ್ಬರು ನೆಚ್ಚಿಕೊಂಡು ಅಡುತ್ತಾರೆ. ದೊಡ್ಡ ಮೊತ್ತ ಪೇರಿಸುವ ಸಾಮರ್ಥ್ಯ ಅವರಲ್ಲಿದೆ.
ಒಂದು ವೇಳೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರು ಉತ್ತಮ ಪ್ರದರ್ಶನ ನೀಡಲು ವಿಫಲವಾದರೆ, ಭಾರತದ ಚಾಂಪಿಯನ್ಸ್ ಟ್ರೋಫಿಯ ಅಭಿಯಾನವು ಅಂತ್ಯವಾಗುವ ಸಂಭವವಿದೆ ಎಂದು ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಇದೆ. ಈ ಸರಣಿಯಲ್ಲಿ ರೋಹಿತ್ ಹಾಗೂ ಕೊಹ್ಲಿ ಲಯಕ್ಕೆ ಮರಳುವ ವಿಶ್ವಾಸವನ್ನು ರೈನಾ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದ ಅತಿಥ್ಯದಲ್ಲಿ ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಫೆ.19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಭಾರತ ʼಎʼ ಗುಂಪಿನಲ್ಲಿದ್ದು, ಇದೇ ಗುಂಪಿನಲ್ಲಿರುವ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ತಂಡಗಳೊಂದಿಗೆ ಸೆಣಸಲಿವೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…