ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ: ಕೊಹ್ಲಿ v/s ವಿಲಿಯಮ್ಸನ್‌ ಫೈನಲ್‌

ದುಬೈ: ವೃತ್ತಿ ಜೀವನದ ಉತ್ತುಂಗದಲ್ಲಿರುವ ಕೊಹ್ಲಿ ಹಾಗೂ ವಿಲಿಯಮ್ಸನ್‌ ಐಸಿಸಿ ಟೂರ್ನಿಗಳಲ್ಲಿ ಮತ್ತೊಮ್ಮೆ ಫೈನಲ್‌ ಪಂದ್ಯ ಆಡಲು ಸಿದ್ದವಾಗಿದ್ದಾರೆ.

ಐಸಿಸಿ ಟೂರ್ನಿಗಳಲ್ಲಿ ಇಬ್ಬರು ತಮ್ಮ ತಂಡದ ಯಶಸ್ಸಿಗೆ ಅಪಾರ ಕೊಡುಗೆ ಸಲ್ಲಿಸಿದ್ದಾರೆ.

ಈ ಹಿಂದೆ 2008ರ ಅಂಡರ್‌-19 ವಿಶ್ವಕಪ್‌ನಲ್ಲಿ ಕೊಹ್ಲಿ ಹಾಗೂ ವಿಲಿಯಮ್ಸನ್‌ ನಾಯಕರಾಗಿ ತಮ್ಮ ತಂಡವನ್ನು ಮುನ್ನಡೆಸಿದ್ದರು. ಅದರಲ್ಲಿ ಕೊಹ್ಲಿ ನೇತೃತ್ವದ ಭಾರತ ತಂಡ ಚಾಂಪಿಯನ್‌ ಆಗಿತ್ತು.

ಆದರೆ, 2021ರ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ನಲ್ಲಿ ವಿಲಿಯಮ್ಸನ್‌ ಮುಂದಾಳತ್ವದ ನ್ಯೂಜಿಲೆಂಡ್‌ ತಂಡ ಮೊದಲ ಬಾರಿಗೆ ಟೆಸ್ಟ್‌ ಚಾಂಪಿಯನ್‌ ಪಟ್ಟ ಆಲಂಕರಿಸಿತ್ತು. ಇದರೊಂದಿಗೆ ಭಾರತದ ಚೊಚ್ಚಲ ಪ್ರಶಸ್ತಿ ಕನಸು ನುಚ್ಚು ನೂರಾಯಿತು.

ಈಗ ಮತ್ತೊಮ್ಮೆ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿ ಇಬ್ಬರು ಎದುರಾಗಲಿದ್ದಾರೆ. ಈ ಸಲ ನಾಯಕತ್ವದ ಜವಾಬ್ದಾರಿ ಇಲ್ಲದಿದ್ದರೂ ಇಬ್ಬರು ತಂಡಗಳ ಅವಿಭಾಜ್ಯ ಅಂಗವಾಗಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

24 seconds ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

11 mins ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

25 mins ago

ಗಾಂಧಿಯನ್ನು ಬದುಕಿಸಿ ಬೆಳಗಿಸಿದ ಆಡು ಪಾಡು

ಡಾ.ರಘುಪತಿ, ಚಿನಾಕಳ್ಳಿ ಅದು ೧೯೧೮ರ ಆಸುಪಾಸು. ಒಂದು ಕಡೆ ಖೇಡಾ ಸತ್ಯಾಗ್ರಹದ ಭರಾಟೆಯಲ್ಲಿ ದೇಶ ಮುಳುಗೇಳುತ್ತಿರುತ್ತದೆ.ಇನ್ನೊಂದೆಡೆ ರೌಲತ್ ಕಾಯ್ದೆಯ ಅಮಾನುಷ…

31 mins ago

ಗಾಂಧಿ ಅಭಿಯಾನ ಅರಿವಿನ ಯಾನ

೨೨ ವಾರಗಳ ಗಾಂಧಿ ಅರಿವಿನ ಯಾನ  ಮಹಾತ್ಮ ಗಾಂಧೀಜಿಯವರ ಜೊತೆಗಿನ ನಿಮ್ಮ ‘ಆಂದೋಲನ’ ಪತ್ರಿಕೆಯ ಅರಿವಿನ ಯಾನದ ಈ ವರ್ಷದ ಕೊನೆಯ…

39 mins ago