ಕ್ರೀಡೆ

ಚೆಸ್| ವಿಶ್ವನಾಥನ್ ಆನಂದ್ ಹಿಂದಿಕ್ಕಿದ ಡಿ.ಗುಕೇಶ್‌ ಭಾರತದ ನಂ.1 ಚೆಸ್‌ ಆಟಗಾರ

ನವದೆಹಲಿ : 17 ವರ್ಷದ ಡಿ. ಗುಕೇಶ್‌ ಅಂತಾರಾಷ್ಟ್ರೀಯ ಚೆಸ್‌ನ ಲೈವ್‌ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ದಿಗ್ಗಜ ವಿಶ್ವನಾಥನ್‌ ಆನಂದ್‌ರನ್ನು ಹಿಂದಿಕ್ಕಿ ಭಾರತದ ನಂ.1 ಆಟಗಾರ ಎನಿಸಿದ್ದಾರೆ.

ಅಜರ್‌ಬೈಜಾನ್‌ನ ಬಾಕುನಲ್ಲಿ ನಡೆಯುತ್ತಿರುವ ವಿಶ್ವಕಪ್‌ನ 2ನೇ ಸುತ್ತಿನಲ್ಲಿ ಸ್ಥಳೀಯ ಆಟಗಾರ ಇಸ್ಕ್ಯಾನ್ಡರೊವ್ ವಿರುದ್ದ ಗೆಲುವು ಸಾಧಿಸಿ 2.5 ರೇಟಿಂಗ್ ಅಂಕಗಳನ್ನು ಗಳಿಸಿದರು. ಇದರೊಂದಿಗೆ ಗುಕೇಶ್‌ರ ಲೈವ್ ರೇಟಿಂಗ್ 2755.9 ಅಂಕಕ್ಕೆ ಏರಿಕೆಯಾಗಿದ್ದು, ವಿಶ್ವ ರ‍್ಯಾಂಕಿಂಗ್‌ನಲ್ಲಿ 9ನೇ ಸ್ಥಾನಕ್ಕೇರಿದ್ದಾರೆ. ಆನಂದ್‌ 2754.0 ಅಂಕ ಹೊಂದಿದ್ದು, ಒಂದು ಸ್ಥಾನ ಇಳಿಕೆ ಕಂಡು 10ನೇ ಸ್ಥಾನ ಪಡೆದಿದ್ದಾರೆ.

1991ರ ಜುಲೈನಲ್ಲಿ ಮೊದಲ ಬಾರಿಗೆ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರ 10ರ ಪಟ್ಟಿಗೆ ಸೇರ್ಪಡೆಗೊಂಡಿದ್ದ ವಿಶ್ವನಾಥನ್ ಆನಂದ್, 1987ರ ಜನವರಿಯಿಂದಲೂ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ನಂ.1 ಆಟಗಾರನಾಗಿ ಮುಂದುವರೆದಿದ್ದರು. ಡಿ ಗುಕೇಶ್ ಮುಂದಿನ ರ‍್ಯಾಂಕಿಂಗ್‌ ಪಟ್ಟಿ ಪ್ರಕಟಗೊಳ್ಳುವವರೆಗೂ(ಸೆ.01) ರೇಟಿಂಗ್ ಕಾಯ್ದುಕೊಂಡರೆ, 1986ರಲ್ಲಿ ಪ್ರವೀಣ್ ಥಿಪ್ಸೆ ಬಳಿಕ ಆನಂದ್‌ಗಿಂತ ಉತ್ತಮ ರ‍್ಯಾಂಕಿಂಗ್‌ ಪಡೆದ ಮೊದಲ ಆಟಗಾರ ಎನ್ನುವ ದಾಖಲೆ ಬರೆಯಲಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago