_Cheteshwar Pujara_Cheteshwar Pujara
ನವದೆಹಲಿ: ಟೆಸ್ಟ್ ದಿಗ್ಗಜ ಚೇತೇಶ್ವರ ಪೂಜಾರ ಅವರಿಂದು ಭಾರತೀಯ ಕ್ರಿಕೆಟ್‌ನ ಎಲ್ಲಾ ಪ್ರಕಾರಗಳಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಹೀಗಾಗಿ 20 ವರ್ಷಗಳ ವೃತ್ತಿಜೀವನಕ್ಕೆ ತೆರೆ ಎಳೆಯಲಾಗಿದ್ದು, ಆದಾಗ್ಯೂ ಪೂಜಾರ ವಿದೇಶಿ ಲೀಗ್‌ಗಳಲ್ಲಿ ಆಡಲು ಲಭ್ಯವಿರುತ್ತಾರೆ. ಪೂಜಾರ ಕೊನೆಯ ಬಾರಿಗೆ ಭಾರತಕ್ಕಾಗಿ ಆಡಿದ್ದು 2023ರಲ್ಲಿ. ಆಸ್ಟ್ರೇಲಿಯಾ ವಿರುದ್ಧ ದಿ ಓವಲ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ.
ರಾಜ್‌ಕೋಟ್‌ನ ಸಣ್ಣ ಪಟ್ಟಣದ ಚಿಕ್ಕ ಹುಡುಗನಾಗಿ, ನನ್ನ ಹೆತ್ತವರೊಂದಿಗೆ ನಾನು ನಕ್ಷತ್ರಗಳನ್ನು ಗುರಿಯಾಗಿಸಲು ಹೊರಟೆ. ಭಾರತೀಯ ಕ್ರಿಕೆಟ್ ತಂಡದ ಭಾಗವಾಗಬೇಕೆಂದು ಕನಸು ಕಂಡಿದ್ದೆ. ಈ ಆಟವು ನನಗೆ ತುಂಬಾ ಖುಷಿ ನೀಡುತ್ತದೆ ಎಂದು ನನಗೆ ಆಗ ತಿಳಿದಿರಲಿಲ್ಲ. ಅಮೂಲ್ಯ ಅವಕಾಶಗಳು, ಅನುಭವಗಳು, ಉದ್ದೇಶ, ಪ್ರೀತಿ ಹಗೂ ಎಲ್ಲದಕ್ಕಿಂತ ಹೆಚ್ಚಾಗಿ ನನ್ನ ರಾಜ್ಯ ಹಾಗೂ ಈ ಮಹಾನ್ ರಾಷ್ಟ್ರವನ್ನು ಪ್ರತಿನಿಧಿಸುವ ಅವಕಾಶ ಎಂದು ಪೂಜಾರ ತಮ್ಮ ನಿವೃತ್ತಿಯ ಬಗ್ಗೆ ಬರೆದುಕೊಂಡಿದ್ದಾರೆ.
ಭಾರತೀಯ ಜೆರ್ಸಿ ಧರಿಸುವುದು, ರಾಷ್ಟ್ರಗೀತೆ ಹಾಡುವುದು ಹಾಗೂ ನಾನು ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ಕೈಲಾದಷ್ಟು ಪ್ರಯತ್ನಿಸುವುದು ಅದರ ನಿಜವಾದ ಅರ್ಥವನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಮತ್ತು ಅಪಾರ ಕೃತಜ್ಞತೆಯಿಂದ ನಾನು ಎಲ್ಲಾ ರೀತಿಯ ಭಾರತೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…