ಬೀಜಿಂಗ್ : ಚೀನಾ ಮಾಸ್ಟರ್ಸ್ ಬ್ಯಾಡ್ಮಂಟನ್ ಟೂರ್ನಮೆಂಟ್‌ನ ಫೈನಲ್ ನಲ್ಲಿ ಭಾರತದ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಅವರು ವಿಶ್ವದ ನಂ.1 ಜೋಡಿಗಳಾದ ಲಿಯಾಂಗ್ ವೀ ಕೆಂಗ್ ಹಾಗೂ ವಾಂಗ್ ಚಾಂಗ್ ವಿರುದ್ಧ ಫೈನಲ್‌ನಲ್ಲಿ ಪರಾಭವಗೊಂಡಿದ್ದಾರೆ.
ಭಾನುವಾರ ನಡೆದ ಈ ಪಂದ್ಯದಲ್ಲಿ ನ.1 ಶ್ರೇಯಾಂಕದ ಭಾರತದ ಜೋಡಿ ಒಂದು ಗಂಟೆ ಹಾಗೂ 9 ನಿಮಿಷಗಳ ಕಾಲ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಚೀನಾದ ಜೋಡಿ 19-21, 21-18, 19-21 ಗೇಮ್‌ಗಳ ಅಂತರದಿಂದ ಸೋಲನುಭವಿಸಿದರು. ಆರಂಭದಿಂದಲೇ ಲಿಯಾಂಗ್ ಹಾಗೂ ವಾಂಗ್‌ರಿಂದ ಸಾತ್ವಿಕ್ ಹೆಚ್ಚು ಒತ್ತಡಕ್ಕೆ ಒಳಗಾದರು. ಮೊದಲ ಗೇಮ್‌ನ್ನು 19-21 ಅಂತರದಿಂದ ಸೋತು ಹಿನ್ನಡೆಯಲ್ಲಿದ್ದ ಭಾರತದ ಜೋಡಿ ಎರಡನೇ ಗೇಮ್ ಅನ್ನು 21-18 ಅಂತರದಿಂದ ಗೆದ್ದುಕೊಂಡು ಮೂರು ಹಾಗೂ ಅಂತಿಮ ಸುತ್ತಿಗೆ ಕಾಲಿಟ್ಟಿತು. ಈ ನಿರ್ಣಾಯಕ ಸುತ್ತಿನಲ್ಲಿ ಚೀನಾದ ಜೋಡಿ ಅಂತಿಮವಾಗಿ 21-19 ಅಂತರದಿಂದ ಗೆಲುವು ದಾಖಲಿಸಿ ಪ್ರಶಸ್ತಿಗೆ ಮುತ್ತಿಕ್ಕಿತು.
ಈ ಗೆಲುವಿನೊಂದಿಗೆ ಲಿಯಾಂಗ್ ಹಾಗೂ ವಾಂಗ್ ಅವರು ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಜೋಡಿ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡರು. ಫೈನಲ್‌ನಲ್ಲಿ ಭಾರತದ ಶಟ್ಲರ್‌ಗಳು ತಮ್ಮ ಶ್ರೇಷ್ಠ ಪ್ರದರ್ಶನ ನೀಡುವಲ್ಲಿ ವಿಫಲರಾದರು.
ಸಾತ್ವಿಕ್ ಹಾಗೂ ಚಿರಾಗ್ 2023ನೇ ವರ್ಷದಲ್ಲಿ ಬ್ಯಾಡ್ಮಿಂಟನ್ ಏಷ್ಯನ್ ಚಾಂಪಿಯನ್‌ಶಿಪ್, ಇಂಡೋನೇಷ್ಯಾ ಸೂಪರ್-1000, ಕೊರಿಯಾ ಸೂಪರ್ 500, ಸ್ವಿಸ್ ಸೂಪರ್ 300 ಹಾಗೂ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…