ಕ್ರೀಡೆ

Paris Olympics 2024: ಪದಕ ಬೇಟೆ ಆರಂಭಿಸಿದ ಚೀನಾ: ಶೂಟಿಂಗ್‌ನಲ್ಲಿ ಮೊದಲ ಚಿನ್ನ!

ಪ್ಯಾರೀಸ್‌: 2024ರ ಪ್ಯಾರೀಸ್‌ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಚೀನಾ ಶುಭಾರಂಭ ಮಾಡಿದೆ. ಟೂರ್ನಿಯ ಮೊದಲ ದಿನವೇ ಚಿನ್ನದ ಪದಕ ಗೆಲ್ಲುವ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಶನಿವಾರ (ಜು.27) ನಡೆದ 10 ಮೀ ಏರ್‌ ರೈಫೆಲ್‌ ಮಿಶ್ರ ತಂಡಗಳ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ ಜಿಹ್ಯೆನ್‌ ಕೆಯುಮ್‌ ಹಾಗೂ ಹಜುನ್‌ ಪಾರ್ಕ್‌ ಜೋಡಿಯನ್ನು 16-12 ಅಂತರದಿಂದ ಸೋಲಿಸಿದ ಹುವಾಂಗ್‌ ಮತ್ತು ಶೆಂಗ್‌ ಜೋಡಿ ಸೋಲಿಸುವ ಮೂಲಕ ಮೊದಲ ಚಿನ್ನವನ್ನು ಗೆದ್ದು ಬೀಗಿತು.

ದಕ್ಷಿಣ ಕೊರಿಯಾದ ಜಿಹ್ಯೆನ್‌ ಕೆಯುಮ್‌ ಹಾಗೂ ಹಜುನ್‌ ಪಾರ್ಕ್‌ ಜೋಡಿ ಬೆಳ್ಳಿ ಪದಕ ಜಯಿಸಿದರೇ, ಕಝಕಿಸ್ತಾನ್‌ನ ಅಲೆಕ್ಸಾಂಡ್ರಾ ಲೆ ಮತ್ತು ಇಸ್ಲಾಂ ಸತ್ಪಯೇವ್‌ ಅವರು ಮೂರನೇ ಸ್ಥಾನ ಪಡೆದು ಕಂಚಿನ ಪದಕ ಜಯಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

8 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

8 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

9 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

10 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

10 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

10 hours ago