ಕ್ರೀಡೆ

ಸಿಎಂ ಸಿದ್ದರಾಮಯ್ಯನವರ ಕ್ರಿಕೆಟ್‌ ಪ್ರೇಮಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂತು!

ಜೂನ್‌. 29ರ ಶನಿವಾರ ಟಿ20 ವಿಶ್ವಕಪ್‌ ನ ಫೈನಲ್‌ ನಡೆದು, ಭಾರತ ತಂಡ ರೋಚಕ ಜಯದೊಂದಿಗೆ ಎರಡನೇ ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿದುತ್ತು. ಪಂದ್ಯದಲ್ಲಿನ ಪ್ರತಿ ಎಸೆತವೂ ಆಟದ ಗತಿ ಬದಲಿಸುವಂತಿದ್ದುದ್ದರಿಂದ ಇಡೀ ದೇಶವೇ ಫೈನಲ್‌ ಪಂದ್ಯದಲ್ಲಿ ಭಾರತ ತಂಡದ ಗೆಲುವಿಗಾಗಿ ಕಾಯುತ್ತ ಕುಳಿತಿತ್ತು.

ಮೂರು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ 9.30ರ ವಿಮಾನ ಹತ್ತಿ ಬೆಂಗಳೂರಿಗೆ ವಾಪಾಸಾಗಬೇಕಿತ್ತು. ಒತ್ತಡಗಳ ನಡುವೆ ಅವರಿಗೆ ಸಿಕ್ಕಿದ್ದು ಕೆಲವೇ ಕೆಲವು ನಿಮಿಷಗಳು ಮಾತ್ರ, ಅದೇ ಅವರ ಒತ್ತಡಗಳನ್ನೆಲ್ಲಾ ಬದಿಗಿಟ್ಟು ವಿಮಾನದ ಬಾಗಿಲಲ್ಲಿ ನಿಂತು ವಿಶ್ವಕಪ್‌ ಟಿ20 ಫೈನಲ್‌ ಪಂದ್ಯ ವೀಕ್ಷಿಸಿದ್ದಾರೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಫೇಸ್‌ ಬುಕ್‌ ನಲ್ಲಿ ಅವರು ಹಂಚಿಕೊಂಡಿದ್ದರು. ಅದರ ಜೊತೆಗೆ ಭಾರತವು ಸಂಘಟಿತ ಪ್ರದರ್ಶನದ ಮೂಲಕ ವಿಶ್ವಕಪ್‌ ಗೆದ್ದು ಬರಲಿ ಎಂದು ಮನದುಂಬಿ ಹಾರೈಸಿದ್ದರು.

ಈ ರೀತಿ ಸಿದ್ದರಾಮಯ್ಯನವರು ಶೇರ್‌ ಮಾಡಿದ್ದ ವೀಡಿಯೋ ಇದೀಗ ಜಾಲತಾಣದಲ್ಲಿ ಭಾರೀ ಹವಾ ಸೃಷ್ಟಿಸಿದೆ. ಈ ವರೆಗೆ ವೀಡಿಯೋವನ್ನು 70 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ, 1,30,000 ಮಂದಿ ಸಿದ್ದರಾಮಯ್ಯನವರ ಕ್ರಿಕೆಟ್‌ ಪ್ರೇಮಕ್ಕೆ ಲೈಕ್‌ ಒತ್ತಿ ಮೆಚ್ಚಿದ್ದಾರೆ. ಸಾವಿರಾರು ಮಂದಿ ಕಮೆಂಟ್‌ ಗಳ ಸುರಿಮಳೆಗೈದು ನಿಮ್ಮ ಕ್ರೀಡಾ ಪ್ರೀತಿಗೆ ನಾವು ಅಭಿಮಾನಿಯಾಗಿದ್ದೇವೆಂದು ಕೊಂಡಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕದ ರಾಜಕಾರಣಿಯೊಬ್ಬರ ಸಾಮಾಜಿಕ ಜಾಲತಾಣದಲ್ಲಿ ಹಾಕಲ್ಪಟ್ಟ ಯಾವೊಂದು ವೀಡಿಯೋ ಕೂಡ ಇಷ್ಟು ವೈರಲ್‌ ಆಗಿಲ್ಲ ಎಂಬುದು ಗಮನಾರ್ಹ.

ಆಗಾಗ್ಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್‌, ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಗಳಿಗೆ ಹೋಗಿ ಪಂದ್ಯ ವೀಕ್ಷಿಸಿ ಆಟಗಾರರಿಗೆ ಚಪ್ಪಾಳೆಯ ಮೂಲಕ ಹುರಿದುಂಬಿಸುತ್ತಿದ್ದ ಸಿದ್ದರಾಮಯ್ಯನವರು ಬಿಡುವಿರದ ದಿನಚರಿಯ ಕಾರಣಕ್ಕೆ ವಿಮಾನದ ಬಾಗಿಲಲ್ಲಿ ನಿಂತು ಕ್ರಿಕೆಟ್‌ ವೀಕ್ಷಿಸಿದ್ದಕ್ಕೆ ಕರುನಾಡು ಕೊಂಡಾಡುತ್ತಿದೆ.

ಒಂದೆಡೆ ಭಾರತ ವಿಶ್ವಕಪ್‌ ಗೆದ್ದಿದೆ, ಇನ್ನೊಂದೆಡೆ ಸಿದ್ದರಾಮಯ್ಯನವರು ನಾಡಿನ ಕ್ರಿಕೆಟ್‌ ಪ್ರಿಯರ ಮನ ಗೆದ್ದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

21 mins ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

1 hour ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

1 hour ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

7 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

7 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

8 hours ago