ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಭಾರತದ ಶ್ರೀಶಂಕರ್ ಮುರುಳಿ ಅವರು ಲಾಂಗ್ ಜಂಪ್ ನಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ.
ಈ ಮೂಲಕ ಕಾಮನ್ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಪಾರ್ಥಕ್ಕೆ ಮೊದಲ ಬೆಳ್ಳಿ ಇದಾಗಿದೆ. ಶ್ರೀಶಂಕರ್ ಮುರುಳಿಯವರು 8.08 ಮೀಟರ್ ಜಿಗಿತದಲ್ಲಿ ಗೆಲುವು ಸಾಧಿಸಿದ್ದಾರೆ.
ಈ ಮೂಲಕ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತವು ಒಟ್ಟು 19 ಪದಕಗಳನ್ನು ಗೆಲ್ಲುವ ಮೂಲಕ 7ನೇ ಸ್ಥಾನದಲ್ಲಿದೆ.