Mysore
27
broken clouds

Social Media

ಬುಧವಾರ, 15 ಜನವರಿ 2025
Light
Dark

ವಿಶ್ವಕಪ್ ನಲ್ಲಿ ಪಿಸಿಬಿ ಭಾಗವಹಿಸುವ ಬಗ್ಗೆ ನಿರ್ಧರಿಸಲು ಸಮಿತಿ ರಚನೆ: ಪಾಕ್ ಪ್ರಧಾನಿ

ಇಸ್ಲಾಮಾಬಾದ್: 2023ರಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಭಾಗವಹಿಸುವ ಬಗ್ಗೆ ನಿರ್ಧರಿಸಲು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದ್ದಾರೆ.

ಈ ಸಮಿತಿಯು ತನ್ನ ಶಿಫಾರಸುಗಳನ್ನು ಷರೀಫ್‌ ಅವರಿಗೆ ಸಲ್ಲಿಸುವ ಮೊದಲು, ಕ್ರೀಡೆ ಮತ್ತು ನೀತಿಯನ್ನು ಹೊರತುಪಡಿಸಿ ಸರ್ಕಾರದ ನೀತಿ, ಆಟಗಾರರು, ಅಧಿಕಾರಿಗಳು, ಅಭಿಮಾನಿಗಳು, ಮಾಧ್ಯಮಗಳು ಮತ್ತು ಭಾರತದ ಪರಿಸ್ಥಿತಿ ಸೇರಿದಂತೆ  ಉಭಯ ದೇಶಗಳ ಸಂಬಂಧಗಳ ಕುರಿತು ಎಲ್ಲಾ ಆಯಾಮಗಳಿಂದ ಪರಿಶೀಲಿಸುತ್ತದೆ ಮತ್ತು ಚರ್ಚಿಸಲಿದೆ.

ಪ್ರಧಾನಿ ಷರೀಫ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪೋಷಕ-ಮುಖ್ಯಸ್ಥರೂ ಆಗಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮತ್ತು ಆತಿಥೇಯ ಬಿಸಿಸಿಐ ಎರಡೂ ಈಗಾಗಲೇ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿವೆ ಮತ್ತು ಅಕ್ಟೋಬರ್ 5 ರಿಂದ ಪ್ರಾರಂಭವಾಗುವ 50 ಓವರ್‌ಗಳ ಏಕದಿನ ವಿಶ್ವಕಪ್ ಗಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ.

ಆದಾಗ್ಯೂ, ಉಭಯ ದೇಶಗಳ ನಡುವಿನ ಉದ್ವಿಗ್ನ ಸಂಬಂಧಗಳಿಂದಾಗಿ ಪಾಕ್ ಕ್ರಿಕೆಟ್ ತಂಡ ವಿಶ್ವಕಪ್ ನಲ್ಲಿ ಭಾಗವಹಿಸುವ ಬಗ್ಗೆ ಸರ್ಕಾರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪಿಸಿಬಿ ಹೇಳಿದೆ.

ಕ್ರೀಡಾ ಸಚಿವ ಅಹ್ಸಾನ್ ಮಜಾರಿ, ಮರ್ಯಮ್ ಔರಂಗಜೇಬ್, ಅಸದ್ ಮಹಮೂದ್, ಅಮೀನ್ ಉಲ್ ಹಕ್, ಕಮರ್ ಜಮಾನ್ ಕೈರಾ ಮತ್ತು ಮಾಜಿ ರಾಜತಾಂತ್ರಿಕ ಅಧಿಕಾರಿ ತಾರಿಕ್ ಫಾತ್ಮಿ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ