Mysore
28
few clouds

Social Media

ಭಾನುವಾರ, 16 ಮಾರ್ಚ್ 2025
Light
Dark

ಕಾಮನ್‌ವೆಲ್ತ್‌ ಗೇಮ್ಸ್‌: ಪುರುಷರ ಬ್ಯಾಟ್‌ಮಿಟನ್ಸ್‌ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಲಕ್ಷ್ಯ ಸೇನ್

ಬರ್ಮಿಂಗ್‌ಹ್ಯಾಮ್ :  ಪಿವಿ ಸಿಂಧೂ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಚಿನ್ನ ಗೆದ್ದ ಬೆನ್ನಲ್ಲೇ ಇದೀಗ ಪುರುಷರ ಬ್ಯಾಟ್‌ಮಿಟನ್ಸ್‌ ವಿಭಾಗದಲ್ಲಿ ಭಾರತ ಲಕ್ಷ್ಯ ಸೇನ್ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಈ ಮೂಲಕ 2022ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ 20ನೇ ಚಿನ್ನದ ಪದಕ ಗೆದ್ದುಕೊಂಡಿದೆ. ಪುರುಷರ ಸಿಂಗ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಲಕ್ಷ್ಯ ಸೇನ್, ಮಲೇಷಿಯಾದ ಝಿ ಯೊಂಗ್ ವಿರುದ್ಧ 19-21, 21-9, 19-16 ಅಂತರದಲ್ಲಿ ಗೆಲುವು ಸಾಧಿಸಿದರು. ಈ ಮೂಲಕ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಕಾಮನ್‌ವೆಲ್ತ್ ಪದಕ ಪಟ್ಟಿಯಲ್ಲಿ ಭಾರತ 20 ಚಿನ್ನ 15 ಬೆಳ್ಳಿ ಹಾಗೂ 22 ಕಂಚಿನ ಪದಕದೊಂದಿಗೆ ಒಟ್ಟು 57 ಪದಕ ಗೆದ್ದುಕೊಂಡಿದೆ. ಇಷ್ಟೇ ಅಲ್ಲ ಪದಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ