ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದಾಖಲೆ ಬರೆದಿದ್ದಾರೆ.

ಇಂದು ನಡೆದ ಸ್ಪರ್ಧೆಯಲ್ಲಿ ಪುರುಷರ ವಿಭಾಗದ 65 ಕೆಜಿ ತೂಕದ ವಿಭಾಗದಲ್ಲಿ ಕೆನಡಾ ದೇಶದ ಮೆಕ್ ನೀಲ್ ಲಾಚ್ಲಾನ್ ಅವರನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ಪುನಿಯಾ ಅವರು ಮುಡಿಗೇರಿಸಿಕೊಂಡಿದ್ದಾರೆ.

ಈ ಮೂಲಕ ಕುಸ್ತಿಯಲ್ಲಿ ಭಾರತಕ್ಕೆ ಇದು ಎರಡನೇ ಪದಕವಾಗಿದೆ. ಕಾಮನ್ ವೆಲ್ತ್ 2022ರ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಏಳನೇ ಚಿನ್ನದ ಪದಕವಾಗಿದೆ.