ಕ್ರೀಡೆ

ಕೊರೊನಾ ಸೋಂಕಿಗೆ ಒಳಪಟ್ಟರು ಟಿ20 ವಿಶ್ವಕಪ್‌ ಆಡಲು ಅವಕಾಶ : ಬಿಸಿಸಿಐ ಘೋಷಣೆ

ಟಿ20 ವಿಶ್ವಕಪ್ : ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಅಭಿಯಾನ ಭಾನುವಾರದಿಂದ ಆರಂಭವಾಗಿದ್ದು, ಅರ್ಹತಾ ಸುತ್ತಿನಲ್ಲೇ ಕೆಲವು ರೋಚಕ ಪಲಿತಾಂಶಗಳು ಹೊರಬಿದ್ದಿವೆ. ಇದರೊಂದಿಗೆ ಐಸಿಸಿ ಕೂಡ ತನ್ನ ನಿಯಮಗಳಲ್ಲಿ ಕೆಲವು ಮಹತ್ತರ ಬದಲಾವಣೆಗಳನ್ನು ಮಾಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಕೊರೊನಾ ಸೋಂಕಿಗೆ ಸಂಬಂಧಿಸಿದ ನಿಯಮಗಳನ್ನು ಸಡಿಲಗೊಳಿಸಿದೆ. ಈ ಹಿಂದೆ, ಯಾವುದೇ ಆಟಗಾರರಿಗೆ ಕೊರೊನಾ ಸೋಂಕು ತಗುಲಿದರೆ ಆ ಆಟಗಾರ ತಂಡದಿಂದ ಬೇರ್ಪಟ್ಟು ನಿರ್ದಿಷ್ಟ ದಿನಗಳವರೆಗೆ ಕ್ವಾರಂಟೈನ್​ನಲ್ಲಿರಬೇಕಿತ್ತು. ಆದರೆ, ಇತ್ತೀಚೆಗೆ ಐಸಿಸಿ ಇದರಲ್ಲಿ ಪ್ರಮುಖ ಬದಲಾವಣೆ ಮಾಡಿದ್ದು, ಕೊರೊನಾ ಸೋಂಕಿತ ಆಟಗಾರರಿಗೂ ವಿಶ್ವಕಪ್‌ನಲ್ಲಿ ಆಡಲು ಅವಕಾಶ ನೀಡಲಾಗುವುದು ಎಂದು ಘೋಷಿಸಿದೆ.

ಈ ಹಿಂದೆ ನಡೆದ 2022 ರ ಕಾಮನ್‌ವೆಲ್ತ್ ಗೇಮ್ಸ್ ಫೈನಲ್‌ನಲ್ಲೂ ಕೊರೊನಾ ಸೋಂಕಿತ ಆಟಗಾರರಿಗೆ ತಂಡದಲ್ಲಿ ಆಡಲು ಐಸಿಸಿ ಅವಕಾಶ ನೀಡಿತ್ತು. ಕಾಮನ್​ವೆಲ್​ ಗೇಮ್ಸ್​ ಫೈನಲ್​ನಲ್ಲಿ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡದ ಆಲ್‌ರೌಂಡರ್ ತಹ್ಲಿಯಾ ಮೆಕ್‌ಗ್ರಾತ್​ಗೆ ಕೊರೊನಾ ಸೋಂಕು ತಗುಲಿತ್ತು. ಆದರೂ ಐಸಿಸಿ ಅವರಿಗೆ ತಂಡದಲ್ಲಿ ಆಡಲು ಅವಕಾಶ ನೀಡಿತ್ತು. ಆದರೆ ತಹ್ಲಿಯಾ ಮಾಸ್ಕ್ ಹಾಕಿಕೊಂಡು ತಂಡದಿಂದ ಪ್ರತ್ಯೇಕವಾಗಿ ಕುಳಿತುಕೊಳ್ಳುವಂತೆ ಸೂಚಿಸಲಾಗಿತ್ತು. ನಂತರ ಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡ ಚಿನ್ನದ ಪದಕ ಗೆದ್ದ ನಂತರ ತನ್ನ ಸಹ ಆಟಗಾರರೊಂದಿಗೆ ಸಂಭ್ರಮಿಸುವುದಕ್ಕೆ ಅವರಿಗೆ ಅವಕಾಶ ನೀಡಿತ್ತು.

ಈಗ ಐಸಿಸಿ ಹೊರಡಿಸಿರುವ ನಿಯಮಾವಳಿಗಳ ಪ್ರಕಾರ ಯಾವುದೇ ಆಟಗಾರ ಸೋಂಕಿಗೆ ತುತ್ತಾದರೆ ಆತನನ್ನು ಕ್ವಾರಂಟೈನ್​ನಲ್ಲಿರಿಸುವಂತಿಲ್ಲ. ಸೋಂಕು ತಗುಲಿದ ಆಟಗಾರ ದೈಹಿಕವಾಗಿ ಸದೃಢರಾಗಿದ್ದರೆ ಆತ ತಂಡದಲ್ಲಿ ಆಡಬಹುದು. ಆದರೆ ಇದಕ್ಕೆ ವೈದ್ಯರ ಅನುಮತಿ ಅವಶ್ಯಕ. ಹಾಗೆಯೇ ಪಂದ್ಯಾವಳಿಯ ಸಮಯದಲ್ಲೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಇರುವುದಿಲ್ಲ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ ಜಾಗತಿಕವಾಗಿ ಕೊರೊನಾ ಸೋಂಕಿನ ತೀವ್ರತೆಯೂ ಸಹ ಕುಂಠಿತಗೊಂಡಿದ್ದು, ಎಲ್ಲರೂ ಸಹ ಲಸಿಕೆಗಳನ್ನು ತೆಗೆದುಕೊಳ್ಳುವ ಮೂಲಕ ಸೋಂಕಿನ ಪ್ರಮಾಣದಲ್ಲಿ ಇಳಿಕೆ ಕಂಡಿದೆ ಎಂದು ಐಸಿಸಿ ಹೇಳಿಕೊಂಡಿದೆ.

ಪಂದ್ಯದ ಬಗ್ಗೆ ಐಸಿಸಿ ನಿಯಮಗಳು

ಪಾಯಿಂಟ್ ವ್ಯವಸ್ಥೆಯ ಪ್ರಕಾರ, ಪಂದ್ಯಾವಳಿಯಲ್ಲಿ ಒಂದು ಪಂದ್ಯದಲ್ಲಿ ಗೆದ್ದ ತಂಡಕ್ಕೆ 2 ಅಂಕಗಳನ್ನು ನೀಡಲಾಗುತ್ತದೆ. ಹಾಗೆಯೇ ಸೋತ ತಂಡಕ್ಕೆ ಯಾವುದೇ ಅಂಕ ಸಿಗುವುದಿಲ್ಲ. ಪಂದ್ಯವು ಟೈ ಆದರೆ ಅಥವಾ ಮಳೆಯಿಂದ ರದ್ದಾದರೆ ಆಗ ಎರಡೂ ತಂಡಗಳಿಗು ತಲಾ 1 ಅಂಕಗಳನ್ನು ನೀಡಲಾಗುತ್ತದೆ. ಅರ್ಹತಾ ಮತ್ತು ಸೂಪರ್-12 ಸುತ್ತುಗಳಿಗೆ ಯಾವುದೇ ಮೀಸಲು ದಿನವನ್ನು ನಿಗದಿಪಡಿಸಿಲ್ಲ. ಅಂದರೆ ಪಂದ್ಯವನ್ನು ರದ್ದುಗೊಳಿಸಿದರೆ, ಅದನ್ನು ರದ್ದತಿ ಎಂದು ಪರಿಗಣಿಸಲಾಗುತ್ತದೆ.

andolana

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

12 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

13 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

13 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

13 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

13 hours ago