ಟಿ20 ವಿಶ್ವಕಪ್ : ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಅಭಿಯಾನ ಭಾನುವಾರದಿಂದ ಆರಂಭವಾಗಿದ್ದು, ಅರ್ಹತಾ ಸುತ್ತಿನಲ್ಲೇ ಕೆಲವು ರೋಚಕ ಪಲಿತಾಂಶಗಳು ಹೊರಬಿದ್ದಿವೆ. ಇದರೊಂದಿಗೆ ಐಸಿಸಿ ಕೂಡ ತನ್ನ ನಿಯಮಗಳಲ್ಲಿ ಕೆಲವು ಮಹತ್ತರ ಬದಲಾವಣೆಗಳನ್ನು ಮಾಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಕೊರೊನಾ ಸೋಂಕಿಗೆ ಸಂಬಂಧಿಸಿದ ನಿಯಮಗಳನ್ನು ಸಡಿಲಗೊಳಿಸಿದೆ. ಈ ಹಿಂದೆ, ಯಾವುದೇ ಆಟಗಾರರಿಗೆ ಕೊರೊನಾ ಸೋಂಕು ತಗುಲಿದರೆ ಆ ಆಟಗಾರ ತಂಡದಿಂದ ಬೇರ್ಪಟ್ಟು ನಿರ್ದಿಷ್ಟ ದಿನಗಳವರೆಗೆ ಕ್ವಾರಂಟೈನ್ನಲ್ಲಿರಬೇಕಿತ್ತು. ಆದರೆ, ಇತ್ತೀಚೆಗೆ ಐಸಿಸಿ ಇದರಲ್ಲಿ ಪ್ರಮುಖ ಬದಲಾವಣೆ ಮಾಡಿದ್ದು, ಕೊರೊನಾ ಸೋಂಕಿತ ಆಟಗಾರರಿಗೂ ವಿಶ್ವಕಪ್‌ನಲ್ಲಿ ಆಡಲು ಅವಕಾಶ ನೀಡಲಾಗುವುದು ಎಂದು ಘೋಷಿಸಿದೆ.
ಈ ಹಿಂದೆ ನಡೆದ 2022 ರ ಕಾಮನ್‌ವೆಲ್ತ್ ಗೇಮ್ಸ್ ಫೈನಲ್‌ನಲ್ಲೂ ಕೊರೊನಾ ಸೋಂಕಿತ ಆಟಗಾರರಿಗೆ ತಂಡದಲ್ಲಿ ಆಡಲು ಐಸಿಸಿ ಅವಕಾಶ ನೀಡಿತ್ತು. ಕಾಮನ್ವೆಲ್ ಗೇಮ್ಸ್ ಫೈನಲ್ನಲ್ಲಿ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡದ ಆಲ್‌ರೌಂಡರ್ ತಹ್ಲಿಯಾ ಮೆಕ್ಗ್ರಾತ್ಗೆ ಕೊರೊನಾ ಸೋಂಕು ತಗುಲಿತ್ತು. ಆದರೂ ಐಸಿಸಿ ಅವರಿಗೆ ತಂಡದಲ್ಲಿ ಆಡಲು ಅವಕಾಶ ನೀಡಿತ್ತು. ಆದರೆ ತಹ್ಲಿಯಾ ಮಾಸ್ಕ್ ಹಾಕಿಕೊಂಡು ತಂಡದಿಂದ ಪ್ರತ್ಯೇಕವಾಗಿ ಕುಳಿತುಕೊಳ್ಳುವಂತೆ ಸೂಚಿಸಲಾಗಿತ್ತು. ನಂತರ ಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡ ಚಿನ್ನದ ಪದಕ ಗೆದ್ದ ನಂತರ ತನ್ನ ಸಹ ಆಟಗಾರರೊಂದಿಗೆ ಸಂಭ್ರಮಿಸುವುದಕ್ಕೆ ಅವರಿಗೆ ಅವಕಾಶ ನೀಡಿತ್ತು.
ಈಗ ಐಸಿಸಿ ಹೊರಡಿಸಿರುವ ನಿಯಮಾವಳಿಗಳ ಪ್ರಕಾರ ಯಾವುದೇ ಆಟಗಾರ ಸೋಂಕಿಗೆ ತುತ್ತಾದರೆ ಆತನನ್ನು ಕ್ವಾರಂಟೈನ್ನಲ್ಲಿರಿಸುವಂತಿಲ್ಲ. ಸೋಂಕು ತಗುಲಿದ ಆಟಗಾರ ದೈಹಿಕವಾಗಿ ಸದೃಢರಾಗಿದ್ದರೆ ಆತ ತಂಡದಲ್ಲಿ ಆಡಬಹುದು. ಆದರೆ ಇದಕ್ಕೆ ವೈದ್ಯರ ಅನುಮತಿ ಅವಶ್ಯಕ. ಹಾಗೆಯೇ ಪಂದ್ಯಾವಳಿಯ ಸಮಯದಲ್ಲೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಇರುವುದಿಲ್ಲ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ ಜಾಗತಿಕವಾಗಿ ಕೊರೊನಾ ಸೋಂಕಿನ ತೀವ್ರತೆಯೂ ಸಹ ಕುಂಠಿತಗೊಂಡಿದ್ದು, ಎಲ್ಲರೂ ಸಹ ಲಸಿಕೆಗಳನ್ನು ತೆಗೆದುಕೊಳ್ಳುವ ಮೂಲಕ ಸೋಂಕಿನ ಪ್ರಮಾಣದಲ್ಲಿ ಇಳಿಕೆ ಕಂಡಿದೆ ಎಂದು ಐಸಿಸಿ ಹೇಳಿಕೊಂಡಿದೆ.
ಪಂದ್ಯದ ಬಗ್ಗೆ ಐಸಿಸಿ ನಿಯಮಗಳು
ಪಾಯಿಂಟ್ ವ್ಯವಸ್ಥೆಯ ಪ್ರಕಾರ, ಪಂದ್ಯಾವಳಿಯಲ್ಲಿ ಒಂದು ಪಂದ್ಯದಲ್ಲಿ ಗೆದ್ದ ತಂಡಕ್ಕೆ 2 ಅಂಕಗಳನ್ನು ನೀಡಲಾಗುತ್ತದೆ. ಹಾಗೆಯೇ ಸೋತ ತಂಡಕ್ಕೆ ಯಾವುದೇ ಅಂಕ ಸಿಗುವುದಿಲ್ಲ. ಪಂದ್ಯವು ಟೈ ಆದರೆ ಅಥವಾ ಮಳೆಯಿಂದ ರದ್ದಾದರೆ ಆಗ ಎರಡೂ ತಂಡಗಳಿಗು ತಲಾ 1 ಅಂಕಗಳನ್ನು ನೀಡಲಾಗುತ್ತದೆ. ಅರ್ಹತಾ ಮತ್ತು ಸೂಪರ್-12 ಸುತ್ತುಗಳಿಗೆ ಯಾವುದೇ ಮೀಸಲು ದಿನವನ್ನು ನಿಗದಿಪಡಿಸಿಲ್ಲ. ಅಂದರೆ ಪಂದ್ಯವನ್ನು ರದ್ದುಗೊಳಿಸಿದರೆ, ಅದನ್ನು ರದ್ದತಿ ಎಂದು ಪರಿಗಣಿಸಲಾಗುತ್ತದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…