ನವದೆಹಲಿ: 128 ವರ್ಷಗಳ ನಂತರ 2028ರ ಲಾಸ್ ಏಂಜಲೀಸ್ ಕ್ರೀಡಾಕೂಟದ ಮೂಲಕ ಒಲಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಟಿ20 ಸ್ವರೂಪದಲ್ಲಿ ನಡೆಸಲು ಬುಧವಾರ ತೀರ್ಮಾನಿಸಲಾಗಿದೆ.
1900ರ ಕ್ರೀಡಾಕೂಟದಲ್ಲಿ ಕ್ರಿಕೆಟ್ ಕೊನೆಯ ಬಾರಿಗೆ ಒಲಂಪಿಕ್ಸ್‌ನಲ್ಲಿ ಕಾಣಿಸಿಕೊಂಡಿತ್ತು. ಅಲ್ಲಿ ಗ್ರೇಟ್ ಬ್ರಿಟನ್ ಮತ್ತು ಫ್ರಾನ್ಸ್ ನಡುವೆ ಎರಡು ದಿನಗಳ ಪಂದ್ಯವನ್ನು ನಡೆಸಲಾಗಿತ್ತು.
ಒಲಂಪಿಕ್ಸ್‌ನ ಈ ಕ್ರಿಕೆಟ್ ಟೂರ್ನಿಯಲ್ಲಿ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ತಲಾ 6 ತಂಡಗಳು ಸ್ಪರ್ಧಿಸುತ್ತವೆ.
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯು (ಐಸಿಸಿ) ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ಐರ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಜಿಂಬಾಂಬ್ವೆ ಸೇರಿದಂತೆ 12 ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ.
ಈ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅರ್ಹತಾ ಮಾನದಂಡಗಳನ್ನು ಇನ್ನೂ ದೃಢಿಕರಿಸಿಲ್ಲ. ಆದರೆ, ಅತಿಥೇಯ ಅಮೇರಿಕಾ ರಾಷ್ಟ್ರವು ನೇರವಾಗಿ ಅರ್ಹತೆ ಪಡೆಯುವ ಸಾಧ್ಯತೆ ಇದೆ. ಅಂದರೆ, ಕೇವಲ ಐದು ತಂಡಗಳಿಗೆ ಅರ್ಹತಾ ಪ್ರಕ್ರಿಯೆ ಮೂಲಕ ಪ್ರವೇಶ ಪಡೆಯಲು ಅವಕಾಶವಿರುತ್ತದೆ.
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…