ಕ್ರೀಡೆ

ಕ್ರಿಕೆಟ್: ಭಾರತ ತಂಡದ ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿ!

ಹೊಸದಿಲ್ಲಿ: ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ಭಾರತ ತಂಡ ಡಿಸೆಂಬರ್ ಹಾಗೂ ಜನವರಿ ಅವಧಿಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಹಮ್ಮಿಕೊಳ್ಳಲಿದೆ. ಈ ಪ್ರವಾಸದಲ್ಲಿ 3 ಪಂದ್ಯಗಳ ಟಿ20, ಅಷ್ಟೇ ಪಂದ್ಯಗಳ ಏಕದಿನ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಗಳಲ್ಲಿ ಕಾದಾಟ ನಡೆಸಲಿದೆ ಎಂದು ಬಿಸಿಸಿಐ ಹಾಗೂ ಕ್ರಿಕೆಟ್‌ ದಕ್ಷಿಣ ಆಫ್ರಿಕಾ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಸ್ತುತ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ, ಕೆರಿಬಿಯನ್ ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 3 ಸ್ವರೂಪದ ಕ್ರಿಕೆಟ್ ಸರಣಿಗಳನ್ನು ಆಡುತ್ತಿದೆ. ಇದಾದ ಬಳಿಕ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡ ಟಿ20 ಸರಣಿ , ಏಷ್ಯಾ ಕಪ್ ಹಾಗು ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಲ್ಲೀನವಾಗಲಿದೆ. ಇದಾದ ಬಳಿಕ ಡಿಸೆಂಬರ್‌ನಲ್ಲಿ ಹರಿಣಗಳ ನಾಡಿಗೆ ಪ್ರವಾಸ ಹಮ್ಮಿಕೊಳ್ಳಲಿದೆ.
https://twitter.com/ProteasMenCSA/status/1679840034185199616?s=20
2021-22ರಸಾಲಿನಲ್ಲಿ ಭಾರತ ತಂಡ ಕೊನೆಯ ಬಾರಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿತ್ತು. ಈ ವೇಳೇ ಟೆಸ್ಟ್‌ ಹಾಗೂ ಏಕದಿನ ಸರಣಿಗಳಲ್ಲಿ ಕಾದಾಟ ನಡೆಸಿತ್ತು. ಈ ವೇಳೆ ಟೆಸ್ಟ್ ಸರಣಿ ಸೋತ ಬೆನ್ನಲ್ಲೇ ಭಾರತ ಟೆಸ್ಟ್‌ ತಂಡದ ನಾಯಕತ್ವವನ್ನು ವಿರಾಟ್‌ ಕೊಹ್ಲಿ ತ್ಯಜಿಸಿದ್ದರು. ಏಕೆಂದರೆ, ವಿರಾಟ್‌ ಕೊಹ್ಲಿಯನ್ನು ಏಕದಿನ ತಂಡದ ನಾಯಕತ್ವದಿಂದ ಕೆಳಗೆ ಇಳಿಸಲಾಗಿತ್ತು. ಇದರಿಂದ ಮುನಿಸಿಕೊಂಡಿದ್ದ ಕೊಹ್ಲಿ ಟೆಸ್ಟ್‌ ನಾಯಕತ್ವವನ್ನು ತ್ಯಜಿಸಿ ಬಿಸಿಸಿಐಗೆ ತಿರುಗೇಟು ನೀಡಿದ್ದರು.
“ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಡಿಸೆಂಬರ್‌ 10 ರಿಂದ 3 ಪಂದ್ಯಗಳ ಟಿ20 ಸರಣಿ ಆರಂಭಗೊಳ್ಳಲಿದ್ದು, ನಂತರ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಇದಾದ ಬಳಿಕ ಮಹಾತ್ಮ ಗಾಂಧೀಜಿ ಹಾಗೂ ನೆಲ್ಸನ್ ಮಂಡೇಲಾ ಗೌರವಾರ್ಥವಾಗಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇತ್ತಂಡಗಳು ಪೈಪೋಟಿ ನಡೆಸಲಿವೆ,” ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಮೂರು ಪಂದ್ಯಗಳ ಟಿ20 ಸರಣಿ ಮೊದಲನೇ ಪಂದ್ಯ ಡಿಸೆಂಬರ್ 10 ರಂದು ಡರ್ಬನ್‌ನಲ್ಲಿ ನಡೆದರೆ, ಡಿಸೆಂಬರ್ 12 ಹಾಗೂ ಡಿಸೆಂಬರ್ 14 ರಂದು ದ್ವಿತೀಯ ಹಾಗೂ ತೃತೀಯ ಪಂದ್ಯಗಳು ನಡೆಯಲಿವೆ. ಅಮೇರಿಕ ಹಾಗೂ ವೆಸ್ಟ್ ಇಂಡೀಸ್ ಅತಿಥ್ಯದಲ್ಲಿ ಜರುಗಲಿರುವ 2024ರ ಸಾಲಿನ ಟಿ20 ವಿಶ್ವಕಪ್ ದೃಷ್ಟಿಯಿಂದ ಯುವ ಆಟಗಾರರಿಗೆ ಈ ಸರಣಿ ಅಗ್ನಿಪರೀಕ್ಷೆಯಾಗಲಿದೆ.
ಡಿಸೆಂಬರ್ 17 ರಂದು ಜೋಹನ್ಸ್‌ಬರ್ಗ್‌ನಲ್ಲಿ ಮೊದಲ ಏಕದಿನ ಪಂದ್ಯದ ಮೂಲಕ 3 ಪಂದ್ಯಗಳ 50 ಓವರ್ ಸರಣಿ ಆರಂಭವಾಗಲಿದೆ. ಇದಾದ ಬಳಿಕ ಮೂರನೇ ಆವೃತ್ತಿಯ ಟೆಸ್ಟ್‌ ಚಾಂಪಿಯನ್‌ಷಿಪ್‌ ಅಂಗವಾಗಿ ನಡೆಯುವ ಗಾಂಧಿ- ಮಂಡೇಲಾ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ಸೆಂಚುರಿಯನ್‌ನಲ್ಲಿ ಡಿಸೆಂಬರ್ 26-30 ನಡೆಯಲಿದೆ. ಇದಾದ ಬಳಿಕ ಎರಡನೇ ಟೆಸ್ಟ್‌ ಪಂದ್ಯ ಜನವರಿ 3 ರಿಂದ 7ರವರೆಗೆ ಕೇಪ್ ಟೌನ್‌ನಲ್ಲಿ ನಡೆಯಲಿದೆ.

ಭಾರತ ತಂಡದ ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿ

ಟಿ20 ಸರಣಿ

ಡಿಸೆಂಬರ್ 10 – ಮೊದಲ ಟಿ20, ಡರ್ಬನ್
ಡಿಸೆಂಬರ್ 12 – ಎರಡನೇ ಟಿ20, ಗ್ಕೆಬರ್ಹಾ
ಡಿಸೆಂಬರ್ 14 – ಮೂರನೇ ಟಿ20, ಜೋಹಾನ್ಸ್‌ಬರ್ಗ್

ಏಕದಿನ ಸರಣಿ

ಡಿಸೆಂಬರ್ 17 – ಮೊದಲನೇ ಏಕದಿನ ಪಂದ್ಯ, ಜೋಹಾನ್ಸ್‌ಬರ್ಗ್
ಡಿಸೆಂಬರ್ 19 – ಎರಡನೇ ಏಕದಿನ ಪಂದ್ಯ, ಗ್ಕೆಬರ್ಹಾ
ಡಿಸೆಂಬರ್ 21- ಮೂರನೇ ಏಕದಿನ ಪಂದ್ಯ, ಪಾರ್ಲ್

ಟೆಸ್ಟ್ ಸರಣಿ

26 -30 ಡಿಸೆಂಬರ್ – ಮೊದಲನೇ ಟೆಸ್ಟ್, ಸೆಂಚುರಿಯನ್
3 – 7 ಜನವರಿ – ಎರಡನೇ ಟೆಸ್ಟ್, ಕೇಪ್ ಟೌನ್‌

andolanait

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

5 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

11 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

15 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

19 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago