Mysore
28
overcast clouds

Social Media

ಸೋಮವಾರ, 06 ಜುಲೈ 2026
Light
Dark

ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಅಕ್ಷರ್‌ ಪಟೇಲ್

ವಡೋದರಾ (ಗುಜರಾತ್)​: ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ತಮ್ಮ ಪ್ರೇಯಸಿ ಮೇಹಾ ಪಟೇಲ್ ಅವರೊಂದಿಗೆ ಬದುಕಿನ ಹೊಸ ಇನಿಂಗ್ಸ್‌ಗೆ ಆರಂಭಿಸಿದ್ದಾರೆ. ಇಬ್ಬರ ನಿಶ್ಚಿತಾರ್ಥ ಕಳೆದ ವರ್ಷ ಅಕ್ಷರ್​ ಪಟೇಲ್​ ಅವರ ಜನ್ಮದಿನದಿಂದೇ ನಡೆದಿತ್ತು. ಇದೀಗ ಗುಜರಾತ್‌ನ ವಡೋದರಾದಲ್ಲಿ ವಿವಾಹೋತ್ಸವ ನಡೆದಿದ್ದು ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.ಜಯದೇವ್ ಉನದ್ಕತ್ ಸೇರಿದಂತೆ ಹಲವು ಕ್ರಿಕೆಟಿಗರು ಸಮಾರಂಭಕ್ಕೆ ಆಗಮಿಸಿದ್ದರು. ಆದರೆ, ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಅನೇಕರು ಮದುವೆಗೆ ಆಗಮಿಸಲು ಸಾಧ್ಯವಾಗಲಿಲ್ಲ. ಅಕ್ಷರ್ ಪಟೇಲ್ ಮತ್ತು 28 ವರ್ಷದ ಮೇಹಾ ಬಹುದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಅಕ್ಷರ್ ಮತ್ತು ಮೇಹಾ ಅವರ ಮದುವೆ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನವಜೋಡಿ ಸಂಗೀತೋತ್ಸವದಲ್ಲಿ ಸಖತ್​ ಹೆಜ್ಜೆ ಹಾಕುತ್ತಿರುವುದನ್ನು ನೋಡಬಹುದು. ಸ್ವತಃ ಮೇಹಾ ಪಟೇಲ್ ಅವರೇ ತಮ್ಮ ಟ್ವಿಟರ್‌ ಹ್ಯಾಂಡಲ್​ನಲ್ಲಿ ಮದುವೆಯ ಹಲವು ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.
ಮೇಹಾ ಪಟೇಲ್ ವೃತ್ತಿಯಲ್ಲಿ ಆಹಾರ ಮತ್ತು ಪೌಷ್ಟಿಕಾಂಶ ತಜ್ಞೆ. ಸಾಮಾಜಿಕ ಜಾಲತಾಣದಲ್ಲಿ ಆಹಾರ ಯೋಜನೆಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಅಕ್ಷರ್ ಮತ್ತು ಮೇಹಾ ಅನೇಕ ಬಾರಿ ಒಟ್ಟಿಗೆ ರಜಾದಿನಗಳನ್ನೂ ಕಳೆದಿದ್ದಾರೆ. ಇತ್ತೀಚೆಗೆ ಅಮೆರಿಕಕ್ಕೆ ಹೋಗಿ ಬಂದಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!