ವಡೋದರಾ (ಗುಜರಾತ್): ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ತಮ್ಮ ಪ್ರೇಯಸಿ ಮೇಹಾ ಪಟೇಲ್ ಅವರೊಂದಿಗೆ ಬದುಕಿನ ಹೊಸ ಇನಿಂಗ್ಸ್‌ಗೆ ಆರಂಭಿಸಿದ್ದಾರೆ. ಇಬ್ಬರ ನಿಶ್ಚಿತಾರ್ಥ ಕಳೆದ ವರ್ಷ ಅಕ್ಷರ್ ಪಟೇಲ್ ಅವರ ಜನ್ಮದಿನದಿಂದೇ ನಡೆದಿತ್ತು. ಇದೀಗ ಗುಜರಾತ್‌ನ ವಡೋದರಾದಲ್ಲಿ ವಿವಾಹೋತ್ಸವ ನಡೆದಿದ್ದು ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.ಜಯದೇವ್ ಉನದ್ಕತ್ ಸೇರಿದಂತೆ ಹಲವು ಕ್ರಿಕೆಟಿಗರು ಸಮಾರಂಭಕ್ಕೆ ಆಗಮಿಸಿದ್ದರು. ಆದರೆ, ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಅನೇಕರು ಮದುವೆಗೆ ಆಗಮಿಸಲು ಸಾಧ್ಯವಾಗಲಿಲ್ಲ. ಅಕ್ಷರ್ ಪಟೇಲ್ ಮತ್ತು 28 ವರ್ಷದ ಮೇಹಾ ಬಹುದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.
ಮೇಹಾ ಪಟೇಲ್ ವೃತ್ತಿಯಲ್ಲಿ ಆಹಾರ ಮತ್ತು ಪೌಷ್ಟಿಕಾಂಶ ತಜ್ಞೆ. ಸಾಮಾಜಿಕ ಜಾಲತಾಣದಲ್ಲಿ ಆಹಾರ ಯೋಜನೆಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಅಕ್ಷರ್ ಮತ್ತು ಮೇಹಾ ಅನೇಕ ಬಾರಿ ಒಟ್ಟಿಗೆ ರಜಾದಿನಗಳನ್ನೂ ಕಳೆದಿದ್ದಾರೆ. ಇತ್ತೀಚೆಗೆ ಅಮೆರಿಕಕ್ಕೆ ಹೋಗಿ ಬಂದಿದ್ದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…