ಹೈದರಾಬಾದ್: ಟೀಂ ಇಂಡಿಯಾ ಮಾಜಿ ಆಟಗಾರ ಅಂಬಾಟಿ ರಾಯುಡು ಹೊಸ ಇನ್ನಿಂಗ್ಸ್ ಆರಂಭಿಸಿದ್ದು, ಆಂಧ್ರಪ್ರದೇಶ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅವರು ಆಂಧ್ರಪ್ರದೇಶ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ವಿಜಯವಾಡದಲ್ಲಿ ಮುಖ್ಯಮಂತ್ರಿ ವೈ.ಎಸ್ ಜಗನ್ ರೆಡ್ಡಿ, ಉಪ ಮಖ್ಯಮಂತ್ರಿ ನಾರಾಯಣ ಸ್ವಾಮಿ, ಸಂಸದ ಪೆದ್ದಿ ರೆಡ್ಡಿ, ಮಿಥುನ್ ರೆಡ್ಡಿ ಸಮ್ಮುಖದಲ್ಲಿ ವೈಎಸ್‌ಆರ್ ಪಕ್ಷಕ್ಕೆ ಸೇರಿದರು.
ಮುಖ್ಯಮಂತ್ರಿ ವೈಎಸ್ ಜಗನ್ ಅವರ ಸಮ್ಮುಖದಲ್ಲಿ ಸಿಎಂ ಕ್ಯಾಂಪ್ ಕಚೇರಿಯಲ್ಲಿ ಭಾರತೀಯ ಖ್ಯಾತ ಕ್ರಿಕೆಟಿಗ ಅಂಬಾಟಿ ತಿರುಪತಿ ರಾಯುಡು ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಮತ್ತು ಸಂಸದ ಪೆದ್ದಿರೆಡ್ಡಿ ಮಿಥುನ್ ರೆಡ್ಡಿ ಭಾಗವಹಿಸಿದ್ದರು ಎಂದು ಪಕ್ಷವು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದೆ.
ಹಲವು ಅಂತರಾಷ್ಟ್ರೀಯ ಪಂದ್ಯಗಳಲ್ಲಿಯೂ ಭಾರತ ತಂಡವನ್ನು ಪ್ರತಿನಿಧಿಸಿರುವ ಅಂಬಾಟಿ ರಾಯುಡು ಆವರು 2023ರಲ್ಲಿ ಚೆನ್ನೈ ಪರವಾಗಿ ಕೊನೆಯ ಐಪಿಎಲ್ ಸೀಸನ್ ಆಡಿದ್ದರು. ಇದರಲ್ಲಿ ಚೆನ್ನೈ ಐದನೇ ಬಾರಿಗೆ ಕಪ್ ಗೆದ್ದಿತ್ತು. ಕಳೆದ ಜೂನ್ ನಲ್ಲಿ ರಾಯುಡು ರಾಜಕೀಯಕ್ಕೆ ಬರುವ ಬಗ್ಗೆ ಘೋಷಣೆ ಮಾಡಿದ್ದರು. ಇದೀಗ ಅವರು ಅಧಿಕೃತವಾಗಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…