ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದು ೪೩ನೇ ಹುಟ್ಟುಹಬ್ಬ ವನ್ನು ಆಚರಿಸಿಕೊಂಡಿದ್ದಾರೆ. ಲಕ್ಷಾಂತರ ಅಭಿಮಾನಿಗಳು ಸಹ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಅದ್ದೂರಿಯಾಗಿಯೇ ಆಚರಿಸುತ್ತಿದ್ದಾರೆ. ಕೆಲವು ಕಡೆ ಕೇಕ್ ಕಟ್ ಮಾಡಿ ಪಟಾಕಿ ಸಿಡಿಸಿ ಅಭಿಮಾನಿಗಳು ಹುಟ್ಟುಹಬ್ಬ ಆಚರಿಸಿದ್ರೆ, ಇನ್ನ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಧೋನಿ ಫೋಟೋ ಮತ್ತು ವಿಡಿಯೋಗಳನ್ನ ಹಾಕಿ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.
೨೦೦೪ ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ಧೋನಿ ಈಗಲೂ ಕ್ರಿಕೆಟ್ ಅಂಗಳದಲ್ಲಿ ಮುಂದುವರೆಯುತ್ತಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಧೋನಿ ವಿದಾಯ ಹೇಳಿದ್ದರೂ ಕೂಡ ೪೩ ವರ್ಷದ ಧೋನಿ ಐಪಿಎಲ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಂಚಿಯಲ್ಲಿ ಜುಲೈ ೬ ೧೯೮೧ ರಲ್ಲಿ ಜನಿಸಿದ ಧೋನಿ ತಮ್ಮ ವೃತ್ತಿಜೀವನದಲ್ಲಿ ಭಾರತಕ್ಕೆ ಹಲವು ಟ್ರೋಫಿಗಳನ್ನ ಗೆದ್ದುಕೊಟ್ಟಿದ್ದಾರೆ. ಅಲ್ಲದೆ ತಮ್ಮ ೧೫ ವರ್ಷದ ಕೆರಿಯರ್ ನಲ್ಲಿ ಧೋನಿ ಹಲವು ವಿಶ್ವದಾಖಲೆಗಳನ್ನ ಮಾಡಿದ್ದಾರೆ. ಅದರಲ್ಲೂ ನಾಯಕನಾಗಿ ಇಡೀ ವಿಶ್ವದಲ್ಲೇ ಯಾರು ಮಾಡದಷ್ಟು ಸಾಧನೆಗಳನ್ನ ಮಾಡಿದ್ದಾರೆ.





